ಹಟ್ಟಿಯಂಗಡಿ: ಒತ್ತಡ ನಿರ್ವಹಣೆ ಮತ್ತು ಮಾದಕ ವಸ್ತುಗಳ ಕುರಿತ ಮಾಹಿತಿ ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಒತ್ತಡ ನಿರ್ವಹಣೆ ಮತ್ತು ಮಾದಕ ವಸ್ತುಗಳ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

Call us

Click Here

ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಉಡುಪಿಯ ಕ್ಲಿನಿಕಲ್ ಸೈಕೋಲಾಜಿಸ್ಟ್ ಆದ ಕ್ಯಾಥರಿನ್ ಜೆನಿಫರ್ ಮಾಬೆನ್ ಅವರು ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆಯ ಬಗ್ಗೆ ತಿಳಿಸುತ್ತಾ, ಒತ್ತಡವು ಒಂದು ಸಾಮಾನ್ಯ ಭೌತಿಕ, ಮಾನಸಿಕ ಮತ್ತು ಭಾವನಾತ್ಮಕ ಪ್ರತಿಕ್ರಿಯೆಯಾಗಿದೆ. ಬದುಕಿನ ಕಠಿಣ ಪರಿಸ್ಥಿತಿಗಳಲ್ಲಿ ಇವು ಎದುರಾಗುತ್ತವೆ. ಇವು ಧನಾತ್ಮಕ ಮತ್ತು ಋಣಾತ್ಮಕ ರೂಪಗಳಲ್ಲಿ ಕಂಡು ಬರುತ್ತವೆ. ಧನಾತ್ಮಕ ಒತ್ತಡವು ನಮ್ಮಲ್ಲಿನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ ಮತ್ತು ಸವಾಲುಗಳನ್ನು ಎದುರಿಸಲು ನೆರವು ನೀಡುತ್ತದೆ. ಋಣಾತ್ಮಕ ಒತ್ತಡವು ನಮ್ಮ ಕಾರ್ಯಕ್ಷಮತೆಯನ್ನು ಕುಗ್ಗಿಸುತ್ತದೆ ಹಾಗೂ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಕೌಟುಂಬಿಕ ಸಮಸ್ಯೆಗಳು, ವಿದ್ಯಾಭ್ಯಾಸದ ತೊಂದರೆಗಳು, ಸಾಮಾಜಿಕ ಪರಿಸ್ಥಿತಿಗಳು, ಆತ್ಮಸಂಶಯಗಳು ಒತ್ತಡಗಳಿಗೆ ಕಾರಣಗಳಾಗುತ್ತವೆ. ಯೋಗ, ಧ್ಯಾನ, ಪ್ರಾಣಾಯಾಮಗಳ ಮೂಲಕ ಒತ್ತಡವನ್ನು ನಿಯಂತ್ರಿಸಿಕೊಳ್ಳಬಹುದು ಎಂಬುವುದನ್ನು ವಿವಿಧ ದೃಷ್ಟಾಂತಗಳ ಮೂಲಕ ತಿಳಿಸಿಕೊಟ್ಟರು.

ಮನೋವೈದ್ಯರು ಹಾಗೂ ಸಾಮಾಜಿಕ ಕಾರ್ಯಕರ್ತೆಯಾದ ವಸಂತಿ ನಾಯಕ್ ಮಾತನಾಡಿ,  ಧೂಮಪಾನ ಮತ್ತು ಮದ್ಯಪಾನಗಳು ಇಂದಿನ ಸಮಾಜದ ಬಹುದೊಡ್ಡ ವೈರಿಗಳಾಗಿವೆ. ಇಂದು ವಿದ್ಯೆ ಕಲಿತ ಯುವ ಸಮುದಾಯವೇ ಈ ಮಾದಕ ವಸ್ತುಗಳ ಸೇವನೆಗೆ ಬಲಿಯಾಗುತ್ತಿದ್ದಾರೆ. ಮಾದಕ ಪದಾರ್ಥಗಳ ಸೇವನೆಯಿಂದ ಹೃದಯ ಮತ್ತು ಲಿವರ್‌ಗೆ ಸಂಬಂಧಿಸಿದ ಕಾಯಿಲೆಗಳು ಕಂಡು ಬರುತ್ತವೆ. ಸೂಕ್ತ ಮುಂಜಾಗೃತಾ ಕಾರ್ಯಕ್ರಮಗಳ ಮೂಲಕ ಇಂತಹ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ, ಆಡಳಿತಾಧಿಕಾರಿ ವೀಣಾ ರಶ್ಮೀ ಎಂ., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಶಿಕ್ಷಕ, ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶಾಲೆಯ ಆಪ್ತಸಮಾಲೋಚಕಿ ಪ್ರತೀಕ್ಷಾ ಕಾರ್ಯಕ್ರಮವನ್ನು ನಿರ್ವಹಿಸಿದರೆ, ಶಿಕ್ಷಕಿ ಭಾಗ್ಯಶ್ರೀ ಧನ್ಯವಾದಗಳನ್ನು ಸಮರ್ಪಿಸಿದರು.

Click here

Click here

Click here

Click Here

Call us

Call us

Leave a Reply