Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇಶದ ಉನ್ನತಿಗೆ ಮಹಿಳೆಯ ಕೊಡುಗೆ ಅನನ್ಯ: ವಿವೇಕ್ ಆಳ್ವ
    alvas nudisiri

    ದೇಶದ ಉನ್ನತಿಗೆ ಮಹಿಳೆಯ ಕೊಡುಗೆ ಅನನ್ಯ: ವಿವೇಕ್ ಆಳ್ವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಕೆಲವು ದೇಶಗಳು ಆರ್ಥಿಕವಾಗಿ ಹಿಂದುಳಿಯಲು ಮಹಿಳಾ ಉದ್ಯೋಗಿಗಳ ಪ್ರಮಾಣ ಕಡಿಮೆ ಪ್ರಮುಖ ಕಾರಣವಾಗಿದೆ. ಯಾವುದೇ ದೇಶ ಅಥವಾ ಸಂಸ್ಥೆ ಉನ್ನತಿಯನ್ನು ಕಾಣಲು ಮಹಿಳೆಯರ ಪಾತ್ರ ಮುಖ್ಯ. ಮಹಿಳೆಯರು ವಿವಿಧ ವೃತ್ತಿರಂಗಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ದೇಶದ ಪ್ರಗತಿಗೆ ಕಾಣಿಕೆ ನೀಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಅಭಿಪ್ರಾಯಪಟ್ಟರು.

    Click Here

    Call us

    Click Here

    ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಘಟಕ ‘ಸಕ್ಷಮಾ’ದ ವತಿಯಿಂದ ಮಹಿಳಾ ಮಾನಸಿಕ ಆರೋಗ್ಯದ ಜಾಗೃತಿ ಕಾರ್ಯಕ್ರಮ ‘ಎಂಪವರ್‌ಹರ್’ ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ವಿವಿಧ ಸ್ತರದ  ಉದ್ಯೋಗಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದನ್ನು ಪ್ರೋತ್ಸಾಹಿಸಿಸುವ ಸಮಾಜ ನಮ್ಮದಾಗಬೇಕು ಎಂದರು. ಆಳ್ವಾಸ್ ಸಂಸ್ಥೆಯ ಯಶಸ್ಸಿನಲ್ಲಿ ಮಹಿಳೆಯರ ಪಾತ್ರ ಅನನ್ಯ. ಮಹಿಳೆಯರು ತಮ್ಮ ಜವಾಬ್ದಾರಿಗಳನ್ನು ಶ್ರೇಷ್ಠತೆಯಿಂದ ನಿಭಾಯಿಸುವುದರಿಂದ  ಸಂಸ್ಥೆಯ ಜೇಷ್ಠತೆ ಹೆಚ್ಚಿದೆ ಎಂದರು.  

    ಮಹಿಳೆಯರು ವೃತ್ತಿ ಜೀವನ ಹಾಗೂ ಕೌಟುಂಬಿಕ ಜೀವನದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹಳ ಅವಶ್ಯ. ಇತ್ತೀಚಿನ ದಿನಗಳಲ್ಲಿ ವಿಭಕ್ತ ಕುಟುಂಬಗಳು ಕೂಡ ಮಾನಸಿಕ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿವೆ ಎಂದರು.

    ನಂತರ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಉಡುಪಿಯ ಡಾ. ಪಿ ವಿ. ಬಾಳಿಗ ಮೆಮೋರಿಯಲ್ ಆಸ್ಪತ್ರೆ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ವೃತ್ತಿ ಜೀವನದ ಸಮತೋಲನ ಮತ್ತು ವೃತ್ತಿ ಜೀವನದಲ್ಲಿ ಮಹಿಳೆಯರ ಮಾನಸಿಕ ಆರೋಗ್ಯದ ಮಹತ್ವದ ಕುರಿತು ಸಂಸ್ಥೆಯ ಮಹಿಳಾ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಗೃಹಿಣಿಯರಿಗೆ ಮತ್ತು ಮಹಿಳಾ ಉದ್ಯೋಗಿಗಳಿಗೆ ಹೋಲಿಸಿದರೆ ಮಹಿಳಾ ಉದ್ಯೋಗಿಗಳು ಹೆಚ್ಚಿನ ಒತ್ತಡವನ್ನು ಅನುಭವಿಸುತ್ತಿರುತ್ತಾರೆ. ಮಹಿಳಾ ಉದ್ಯೋಗಿಗಳ ಮಾನಸಿಕ ಆರೋಗ್ಯವು ಸಂಸ್ಥೆಯ ಏಳಿಗೆಯ ಮೇಲೂ ಪರಿಣಾಮ ಬೀರಬಲ್ಲದು. 

    ಮಹಿಳೆಯರಿಗೆ ವೃತ್ತಿ ಜೀವನ ಮತ್ತು ಕೌಟುಂಬಿಕ ಜೀವನವನ್ನು ಜೊತೆಯಲ್ಲೇ ಸಂಭಾಳಿಸಲು ಕಷ್ಟವಾದಾಗ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬಿರುತ್ತದೆ. ನಾವು ವೃತ್ತಿಯನ್ನು ನಿರ್ವಹಿಸುವ ರೀತಿಯಲ್ಲಿ ನಮ್ಮ ಮಾನಸಿಕ ಆರೋಗ್ಯ ನಿರ್ಧಾರವಾಗುತ್ತದೆ. ನಾವು ಮಾಡುವ ಕೆಲಸವನ್ನು ಖುಷಿಯಿಂದ ನಿರ್ವಹಿಸಿದಾಗ ಮಾನಸಿಕ ಸಮಸ್ಯೆಗಳು ತಗ್ಗುತ್ತದೆ ಎಂದರು. ಸಿಟ್ಟು, ಬೇಸರ, ದ್ವೇ?, ಅಸಹನೆ, ಕೀಳರಿಮೆಗಳಂತಹ ಭಾವನೆಗಳು ಮಾನಸಿಕ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

    Click here

    Click here

    Click here

    Call us

    Call us

    ಭಾವನೆಗಳ ನಿಯಂತ್ರಣದಿಂದ ಸಂತೋಷದಾಯಕ ಜೀವನ ಸಾಧ್ಯ.  ನಮ್ಮ ಮುಖದಲ್ಲಿ ಚಿಂತೆಯ ಸುಕ್ಕು ಎಂದು ಮೂಡದಿರಲಿ. ಒತ್ತಡ ನಮ್ಮ ನಿರೀಕ್ಷೆಗಳ ಮತ್ತು ವಾಸ್ತವದ ನಡುವಿನ ವ್ಯತ್ಯಾಸವಾಗಿದೆ. ಒತ್ತಡ ಕಡಿಮೆಯಾದಾಗ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಶೇ.98% ದುಗುಡಗಳು ನಿಜವಿರುವುದಿಲ್ಲ. ಆದರೆ ಮಿತವಾದ ಒತ್ತಡವು ವಾಸ್ತವವಾಗಿ ಕಾರ್ಯಕ್ಷಮತೆ ಮತ್ತು ದಕ್ಷತೆಯನ್ನು ಹೆಚ್ಚಿಸಬಲ್ಲದು ಎಂದರು.

    ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಮನೋವಿಜ್ಞಾನ ಉಪನ್ಯಾಸಕಿ ಸಾರ ಕ್ರಾಸ್ತ ವಿದ್ಯಾರ್ಥಿನಿಯರಲ್ಲಿ ಮಾನಸಿಕ ಯೋಗಕ್ಷೇಮದ ಕುರಿತು ಉಪನ್ಯಾಸ ನೀಡಿ ಕಲಿಕೆ, ಪರೀಕ್ಷೆ, ವೃತ್ತಿ ಜೀವನದ ಆಯ್ಕೆ, ಗೆಳೆತನ ಸಾಮಾಜಿಕ ಮಾಧ್ಯಮಗಳ ಪರಿಣಾಮ ವಿವರಿಸಿದರು. ಈಗಿನ ಯುವ ಜನಾಂಗ ಮತ್ತು ಹಿಂದಿನ ತಲೆಮಾರು ಹೀಗೆ ಭಿನ್ನವಾಗಿತ್ತು ಮತ್ತು ಇಂದಿನ ಸಮುದಾಯ ಎದುರಿಸತ್ತಿರುವ ತೊಂದರೆಗಳಾದ ಮೊಬೈಲ್ ಅವಲಂಬನೆ, ಸೃಜನಶೀಲತೆಯ ಕೊರತೆ, ತಮ್ಮನ್ನು ಸಮಾಜದಿಂದ ಪ್ರತ್ಯೇಕಿಸುವುದರ ಕುರಿತು ವಿವರಿಸಿದರು.

    ಮಾನಸಿಕ ಆರೋಗ್ಯವನ್ನು ಹತೋಟಿಯಲ್ಲಿಟ್ಟುಕೊಳ್ಳಲು ಮೆದುಳಿಗೆ ನೀಡಬೇಕಾದ ವಿಶ್ರಾಂತಿ, ಲಘು ನಿದ್ದೆ, ಸಕರಾತ್ಮಕ ಚಿಂತನೆಗಳು ಅಗತ್ಯ ಎಂದರು.

    ಕಾರ್ಯಕ್ರಮದಲ್ಲಿ ಸಕ್ಷಮ ಮಹಿಳಾ ಘಟಕದ ಮಾಸಿಕ ಇ-ಪೋಸ್ಟರ್- ‘ಶಿರೋಸ್’ಬಿಡುಗಡೆ ಮಾಡಲಾಯಿತು.

    ಆಳ್ವಾ ಫಾರ್ಮಸಿಯ ಮುಖ್ಯ ನಿರ್ವಾಹಕಿ ಡಾ. ಗ್ರೀಷ್ಮಾ ಆಳ್ವ, ಮೂಡಬಿದಿರೆಯ  ಮಹಿಳಾ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷೆ ಶೋಭಾ ಹೆಗ್ಡೆ, ಸಕ್ಷಮಾ ಘಟಕದ ಅಧ್ಯಕ್ಷೆ ಡಾ. ಮೂಕಾಂಬಿಕಾ ಮತ್ತಿತರರು ಇದ್ದರು. 

    ಪದವಿ ಪೂರ್ವ ಕಾಲೇಜಿನ ಅಧ್ಯಾಪಕಿ ಮಲ್ಲಿಕಾ ಎಂ. ಆರ್ ನಿರೂಪಿಸಿದರು. ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ನ ಉಪ ಪ್ರಾಂಶುಪಾಲೆ ಶ್ರೀ ವನಿತಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.