ಗಂಗೊಳ್ಳಿ: ನೂತನ ತರಗತಿ ಕೊಠಡಿಗಳ ಶಂಕು ಸ್ಥಾಪನೆ ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಹಳೆ ವಿದ್ಯಾರ್ಥಿ ಸಂಘ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇದರ ರಜತ ಮಹೋತ್ಸವದ ಪ್ರಯುಕ್ತ ನಿರ್ಮಿಸಲಾಗುವ ನೂತನ ತರಗತಿ ಕೊಠಡಿಗಳ ಶಂಕು ಸ್ಥಾಪನೆ ಕಾರ್ಯಕ್ರಮ ಗುರುವಾರ ನಡೆಯಿತು.

Call us

Click Here

ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಎರಡು ತರಗತಿ ಕೊಠಡಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಸಂಘದ ರಜತ ಮಹೋತ್ಸವದ ಪ್ರಯುಕ್ತ ಶಾಲೆಗೆ ಅಗತ್ಯವಿರುವ ತರಗತಿ ಕೊಠಡಿ, ಆವರಣ ಗೋಡೆ, ಕಂಪ್ಯೂಟರ್ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಾವಶ್ಯಕ ಈ ಕಾರ್ಯಗಳಿಗೆ ದಾನಿಗಳು, ಹಳೆ ವಿದ್ಯಾರ್ಥಿಗಳು ಸಹಕಾರ ನೀಡಿ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

ಪುರೋಹಿತರಾದ ಜಿ. ವಿಠಲದಾಸ ಭಟ್ ಮತ್ತು ಜಿ. ವಸಂತ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಎಲ್.ಮೇಸ್ತ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ, ಉಪಾಧ್ಯಕ್ಷೆ ಗಾಯತ್ರಿ ಕೊಡಂಚ, ಶಾಲಾ ಮುಖ್ಯೋಪಾಧ್ಯಾಯ ಗಂಗಾಧರ ಬಂಟ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಎ.ಆರ್.ವಲಿವುಲ್ಲಾ, ಕಾರ್ಯದರ್ಶಿ ರಾಘವೇಂದ್ರ ಡಿ., ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಗಣೇಶ ನಾಯಕ್, ರೇಷ್ಮಾ ಚಿತ್ತಾಲ್, ನಿವೃತ್ತ ಮುಖ್ಯ ಶಿಕ್ಷಕ ಜಯರಾಮ ಶೆಟ್ಟಿ, ಶ್ರೀಧರ ಟಿ.ಪೂಜಾರಿ, ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕರು, ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Leave a Reply