ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕೊಲ್ಲೂರು ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ನೇತೃತ್ವದಲ್ಲಿ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟ 2024 ಶುಕ್ರವಾರ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.
ರಾಷ್ಟಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಬಿ. ಕರುಣಾಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಧ್ವಜಾರೋಹಣಗೈದರು.
ರಾಜ್ಯದ ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಕೊಲ್ಲೂರು ದೇವಳ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಕಾಮನ್‌ವೆಲ್ತ್ ವಿಜೇತ ಕ್ರೀಡಾಪಟು ಗುರುರಾಜ ಪೂಜಾರಿ ಜಡ್ಡು, ನೆಟ್‌ಬಾಲ್ ಕ್ರೀಡಾಪಟು ನಿತಿನ್ ಅವರನ್ನು ಸನ್ಮಾನಿಸಲಾಯಿತು.
ಕೊಲ್ಲೂರು ದೇವಳದ ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಶೆಟ್ಟಿ, ಉಡುಪಿ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕ ಮಾರುತಿ, ಶಿವರಾಮ ಕೃಷ್ಣ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯ ರಘುರಾಮ ದೇವಾಡಿಗ, ಕೊಲ್ಲೂರು ಗ್ರಾಪಂ ಉಪಾಧ್ಯಕ್ಷ ನಾಗೇಶ್ ದಳಿ, ಪ್ರೌಡಶಾಲಾ ಮುಖ್ಯೋಪಾಧ್ಯಾಯ ನಾಗರಾಜ ಭಟ್, ಕ್ರೀಡಾ ಸಂಯೋಜಕ ವಿಜಯಕುಮಾರ್ ಶೆಟ್ಟಿ, ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಎ., ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸ್ಮಠ, ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಶೆಟ್ಟಿ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ ಸ್ವಾಗತಿಸಿದರು. ಕಿಶೋರ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕೊಲ್ಲೂರಿನ ಲಲಿತಾಂಬಿಕಾ ಅತಿಥಿ ಗೃಹದಿಂದ ಪುರ ಮೆರವಣಿಗೆ ನಡೆಯಿತು.