ವಿಶ್ವವಿನಾಯಕ ಆಂಗ್ಲ ಮಾದ್ಯಮ ಶಾಲೆ: 18 ನೇ ವಾರ್ಷಿಕ ಕ್ರೀಡಾಕೂಟ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತೆಕ್ಕೆಟ್ಟೆಯ ವಿಶ್ವವಿನಾಯಕ ನ್ಯಾಷನಲ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್‌ನ 18 ನೇ ವಾರ್ಷಿಕ ಕ್ರೀಡಾಕೂಟ ಇತ್ತೀಚಿಗೆ ಜರುಗಿತು.

Call us

Click Here

ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಇದರ ದೈಹಿಕ ಶಿಕ್ಷಕರಾದ ಜೀವನ್ ಕುಮಾರ್ ಶೆಟ್ಟಿ ಕ್ರೀಡೋತ್ಸವವನ್ನು ಉದ್ಗಾಟಿಸಿ ಮಾತನಾಡಿ ಕ್ರೀಡೆ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರೊಂದಿಗೆ ಉತ್ತಮ ಸಾಧನೆ ಮಾಡಿದರೆ ಬದುಕನ್ನು ಕಟ್ಟಿಕೊಳ್ಳಬಹುದು. ಪ್ರತಿ ಕ್ರೀಡೆಗಳನ್ನು ವೈಜ್ಞಾನಿಕ ಸೂತ್ರಗಳೊಂದಿಗೆ ಅಭ್ಯಾಸ ಮಾಡಿದರೆ ಗೆಲುವು ನಿಶ್ಚಿತ ಎಂದು ಹೇಳಿದರು.

ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ವಲಯದ ರೇಂಜ್ ಪೋರೆಸ್ಟ್ ಆಫಿಸರ್ ಸಂದೇಶ್ ಕುಮಾರ್‌ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಶರೀರವನ್ನು ಸಧೃಢಗೊಳಿಸಲು ಶಾರೀರಿಕ ವ್ಯಾಯಾಮ ಬಹು ಮುಖ್ಯ ಎಂದು ತಿಳಿಸಿದರು. ಕ್ರೀಡೆಯಲ್ಲಿ ಕಲೆ ಮತ್ತು ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಅಂಶಗಳು ಒಳಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.

ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್‌. ಅವರು ಮಾತನಾಡಿ, ಕ್ರೀಡೆಗಳು ಶಿಸ್ತು, ಸಂಯಮ ಹಾಗೂ ಏಕಾಗ್ರತೆಯನ್ನು ಕಲಿಸುವಲ್ಲಿ ಸಹಕಾರಿಯಾಗಿದೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಕ್ಕಳ ಉತ್ಸಾಹ ಹಾಗೂ ಸ್ಪರ್ಧಾ ಮನೋಭಾವವನ್ನು ಪ್ರಶಂಸಿದರು.

Click here

Click here

Click here

Click Here

Call us

Call us

ವಿವಿಧ ಆಟೋಟ ಹಾಗೂ ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅತ್ಯುನ್ನತ ಅಂಕಗಳನ್ನು ಗಳಿಸಿ ಸ್ವರ್ಣ ಗ್ರೂಪ್‌ನ ವಿದ್ಯಾರ್ಥಿಗಳು 2024-25ನೇ ಸಾಲಿನ ಚಾಂಪಿಯನ್ ತಂಡವಾಗಿ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು. ಕಾವೇರಿ ಗ್ರೂಪ್‌ನ ವಿದ್ಯಾರ್ಥಿಗಳು ಧ್ವಿತೀಯ ಸ್ಥಾನ ಗಳಿಸಿ ರನ್ನರ್ ಅಪ್ ಟ್ರೋಫಿಯನ್ನು ಪಡೆದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಡ್ರಿಲ್, ಯೋಗ, ಲೇಜಿಮ್, ಡಂಬಲ್ಸ್, ಹೂಪ್ಸ್, ಕರಾಟೆ, ಪಿರಾಮಿಡ್ ಮೊದಲಾದ ಸಾಹಸ ಕ್ರೀಡೆಗಳನ್ನು ಪ್ರದರ್ಶಿಸಿದರು.

ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ. ಆಲ್ಮೇಡಾ,  ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

ದೈಹಿಕ ಶಿಕ್ಷಕರುಗಳಾದ ಆನಂದ್ ಹಾಗೂ  ಪ್ರದೀಪ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಸಂಘಟಿಸಿದರು. ಶಿಕ್ಷಕಿಯರಾದ ನಾಗರತ್ನ ಹೆಬ್ಬಾರ್ ಹಾಗೂ ರೋಹಿಣಿ ಕಾರ್ಯಕ್ರಮ ನಿರ್ವಹಿಸಿದರು, ಶಿಕ್ಷಕಿ ಸ್ಮಿತಾ ನಾಯಕ್ ಹಾಗೂ ಸಂದ್ಯಾ ಆಚಾರ್ಯ ಸ್ವಾಗತಿಸಿ, ಪರಿಚಯಿಸಿದರು, ಸುಷ್ಮಾ ಆರ್. ಹಾಗೂ ವಿನೋದ್ ವಂದಿಸಿದರು.

Leave a Reply