Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನ ಆಚರಣೆ
    alvas nudisiri

    ಆಳ್ವಾಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನ ಆಚರಣೆ

    Updated:27/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ, ನಾಗರಿಕತೆ, ಸಂಸ್ಕೃತಿಯಲ್ಲಿದೆ. ನಮ್ಮದು ಅಪ್ಪಟ ದೇಶೀಯ, ಅಸಮಾನತೆ ನಿರ್ಮೂಲನೆಯ ಪರಿವರ್ತನಾಶೀಲ ಸಂವಿಧಾನ ಎಂದು ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕಾನೂನು ಪೀಠದ ಪ್ರಾಧ್ಯಾಪಕ ಡಾ. ಪಿ. ಪುನೀತ್ ಹೇಳಿದರು.

    Click Here

    Call us

    Click Here

    ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಮಾನವಿಕ ವಿಭಾಗಗಳು ಹಮ್ಮಿಕೊಂಡ ‘ರಾಷ್ಟ್ರೀಯ ಸಂವಿಧಾನ ದಿನ’ ಆಚರಣೆಯಲ್ಲಿ ಅವರು ಮಾತನಾಡಿದರು. ಸಂವಿಧಾನ ಕುರಿತು ಅದರ ರಚನೆ ಸಂದರ್ಭದಲ್ಲಿಯೇ ಆರೋಪಗಳು ಬಂದಿದ್ದವು. ಆದರೆ, ಅದಕ್ಕೆ ರಚನಾ ಸಮಿತಿ ವಿಸ್ತೃತವಾಗಿ ಉತ್ತರಿಸಿತ್ತು ಎಂದರು.

    ಇತರರ ತಪ್ಪಿನಿಂದ ನೀವು ತಿದ್ದಿಕೊಳ್ಳಿ ಎಂದು ಚಾಣಕ್ಯ ಹೇಳಿದ್ದರು. ಜ್ಞಾನ ಎಲ್ಲೆಡೆಯಿಂದ ಬರಲಿ ಎಂದು ಋಗ್ವೇದ ಹೇಳಿದೆ. ಇದನ್ನು ಉಲ್ಲೇಖಿಸಿದ ಅಂಬೇಡ್ಕರ್, ಯಾವುದೇ ಉನ್ನತ ಮೌಲ್ಯಗಳನ್ನು ಅನುಕರಿಸುವುದು ಅಥವಾ ಅನುಸರಿಸುವುದು ತಪ್ಪಲ್ಲ ಎಂದು ಹೇಳಿದ್ದರು.

    ಸಂವಿಧಾನ ರಚನಾ ಸಮಿತಿಯಲ್ಲಿ ನಡೆದ ಚರ್ಚೆಯು ದೇಶದಲ್ಲಿ ನಡೆದ ಅತ್ಯುತ್ತಮ ಚರ್ಚೆ ಎಂದು ವಿವರಿಸಿದರು. ಸಂವಿಧಾನಗಳ ಸರಾಸರಿ ಜೀವಿತಾವಧಿ 17 ವರ್ಷವಾಗಿದೆ. ಆದರೆ, 76ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಭಾರತದ ಸಂವಿಧಾನ ಜಗತ್ತಿನ ಅತಿದೊಡ್ಡ ಮಾತ್ರವಲ್ಲ ಅತ್ಯುತ್ತಮ ಸಂವಿಧಾನ. 106 ತಿದ್ದುಪಡಿ ಆಗಿದ್ದರೂ ಸ್ಥಿರವಾಗಿದೆ. ಥಾಮಸ್ ಗಿನ್ಸ್ ಬರ್ಗ್ ನಡೆಸಿದ ಅಧ್ಯಯನದ ಪ್ರಕಾರ ಸಂವಿಧಾನದ ಸರಾಸರಿ ಜೀವಿತಾವಧಿ 17 ವರ್ಷ ವಿಶ್ವದ 798 ಸಂವಿಧಾನ ವ್ಯವಸ್ಥೆಯನ್ನು ಅವರು ಅಧ್ಯಯನ ನಡೆಸಿದ್ದು, ಈ ಪೈಕಿ 192 ಮಾತ್ರ ಇನ್ನೂ ಅನುಷ್ಠಾನದಲ್ಲಿವೆ ಎಂದರು.

    ಈ ಪೈಕಿ ಜಗತ್ತಿನ ಶೇಕಡಾ 50 ಸಂವಿಧಾನಗಳು ಈಗಿಲ್ಲ. ಕೆಲವು ವರ್ಷಚರಣೆಯನ್ನೂ ಮಾಡಿಲ್ಲ. ಆದರೆ ಸಂವಿಧಾನ ರಚಿಸುವಾಗ ಅಮರ ಎಂಬ ಚಿಂತನೆ ಸಹಜ. ಸಂವಿಧಾನ 50 ವರ್ಷ ಬದುಕಿದರೆ, ಅದರ ಭವಿಷ್ಯ ಉತ್ತಮವಾಗಿರುತ್ತದೆ. ಅದು ಸ್ಪಟಿಕೀಕರಣಗೊಂಡು ಸದೃಢವಾಗುತ್ತದೆ ಎಂದರು. ನವೆಂಬರ್ 26 ದಿನವನ್ನು ಸಂವಿಧಾನದ ಅನುಷ್ಠಾನ ದಿನ ಎಂದು ಆಚರಿಸಲಾಗುತ್ತದೆ. ಆದರೆ, ಆ ದಿನವನ್ನು ಮೊದಲೇ ಕಾನೂನು ದಿನ ಎಂದು ಆಚರಿಸಲಾಗುತ್ತಿತ್ತು ಎಂದರು.

    Click here

    Click here

    Click here

    Click Here

    Call us

    Call us

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ನಮ್ಮ ಆಲೋಚನಾ ಕ್ರಮ ಬದಲಾಗಬೇಕಾಗಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗವನ್ನು ಸಮಾನಂತರವಾಗಿ ಕಾಣಬೇಕು. ಪ್ರಸ್ತುತ ಸಮಾಜದಲ್ಲಿ ಔದ್ಯೋಗಿಕ ಕೊರತೆಗಿಂತ ಹೆಚ್ಚಾಗಿ, ಬೇಡಿಕೆ ಅನುಗುಣವಾಗಿ ವಿಷಯ ಆಯ್ಕೆಯ ಸಮತೋಲನ ಆಗುತ್ತಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

    ಶೈಕ್ಷಣಿಕ ವ್ಯವಸ್ಥೆಯಲ್ಲಿ ಜ್ಞಾನ ತುಂಬಿದ ಡಬ್ಬಗಳು ತೆರೆದುಕೊಳ್ಳಬೇಕು. ಸೀಮಿತ ದೃಷ್ಟಿಕೋನ ಬಿಟ್ಟು, ಅಂತರಶಿಸ್ತೀಯ ಅಧ್ಯಯನ ನಡೆಸಬೇಕು ಎಂದರು. ದೇಶದ ಬಹುತ್ವ ಬಹುಮುಖ್ಯ. ನಮ್ಮೆಲ್ಲರನ್ನು ಒಂದು ಮಾಡಿರುವುದು ದೇಶದ ಸಂವಿಧಾನ. ಸೀಮಿತ ಸಿದ್ಧಾಂತಗಳಿಂದ ಹೊರಬನ್ನಿ ಎಂದರು.

    ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಮಾನವೀಯತೆಯ ಅತ್ಯುತ್ತಮ ಮೌಲ್ಯಗಳನ್ನು ಹೊಂದಿದ ಸಂವಿಧಾನ ನಮ್ಮದು. ದಾಸ್ಯ, ಶೋಷಣೆ  ಮುಕ್ತ ಸಮಾಜ ನೀಡಿದೆ ಎಂದರು. ಅಂದು, ಸತಿ ಪದ್ಧತಿ ಪರವಾಗಿಯೂ ಹೋರಾಡಿದ ಜನ ನಮ್ಮ ದೇಶದಲ್ಲಿ ಇದ್ದರು. ಆದರೆ, ಜನರ ಇಚ್ಛೆಯೇ ಜನರನ್ನು ಆಳಬೇಕು ಎಂದರು. ಗಿಡ ನೆಟ್ಟು ಬೆಳೆಸಿದವರಿಗೆ ಫಲ ದೊರೆಯಬೇಕು. ವೈಚಾರಿಕತೆ ಇದ್ದ ಸಮಾಜ ಮಾತ್ರ ಜನರನ್ನು ಬದುಕಲು ಬಿಡುತ್ತದೆ. ಇಲ್ಲದಿದ್ದರೆ ಅವಸಾನ ಸಹಜ ಎಂದರು.

    ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಡಿ, ಕುಲಸಚಿವ (ಶೈಕ್ಷಣಿಕ) ಡಾ.ಟಿ.ಕೆ.ರವೀಂದ್ರನ್ ಇದ್ದರು. ವಿದ್ಯಾರ್ಥಿನಿ ಅನುಷಾ ಮತ್ತು ಶ್ರೀವಲ್ಲಿ ಕಾರ್ಯಕ್ರಮ ನಿರೂಪಿಸಿದರು. ದಿಶಾ ಸ್ವಾಗತಿಸಿದರು. ರಕ್ಷಾ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ತೇಜಸ್ವಿನಿ ವಂದಿಸಿದರು.

    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    twelve + three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.