Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರೀಯ ಹೆದ್ದಾರಿ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ರಾಷ್ಟ್ರೀಯ ಹೆದ್ದಾರಿ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ರಸ್ತೆಯ ನಿರ್ವಹಣೆಯನ್ನು ಕಾಲಕಾಲಕ್ಕೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಗುತ್ತಿಗೆದಾರರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಳೆಯಿಂದಾಗಿ ಉಂಟಾದ ಹೊಂಡ ಗುಂಡಿಗಳನ್ನು ದುರಸ್ಥಿ ಮಾಡುವ ಬಗ್ಗೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳು ಶುಲ್ಕವನ್ನು ಕಟ್ಟಿ ಸಂಚರಿಸುತ್ತವೆ. ಸದರಿ ವಾಹನಗಳು ಸರಾಗವಾಗಿ ಸಂಚರಿಸಲು ಅನುಕೂಲವಾಗುವಂತೆ ಹೆದ್ದಾರಿ ನಿರ್ವಹಣೆಯನ್ನು ಮಾಡಬೇಕು. ಮಾನ್ಸೂನ್ ಮಳೆಯಿಂದಾಗಿ ರಸ್ತೆಯಲ್ಲಿ ಹೊಂಡಗಳು ಬಿದ್ದಿವೆ ಹಾಗೂ ರಸ್ತೆ ಬದಿಯ ಬೀದಿದೀಪಗಳು ನಿರ್ವಹಣೆ ಸರಿಯಿಲ್ಲ ಎನ್ನುವ ದೂರುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿವೆ. ಕೂಡಲೇ ಈ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

    ಸ್ಥಳೀಯ ಜನರು ರಸ್ತೆ ಕುಂದುಕೊರತೆ ಬಗ್ಗೆ ದೂರು ನೀಡಿದಾಗ ಅವುಗಳಿಗೆ ಸ್ಪಂದಿಸಿ,  ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ರಸ್ತೆ ನಿರ್ವಹಣೆ ಕಾಮಗಾರಿಗಳನ್ನು ಆಗಿಂದಾಗ್ಗೆ ಸಮನ್ವಯದೊಂದಿಗೆ ಕೈಗೊಂಡು ಕಾರ್ಯನಿರ್ವಹಿಸಿದಾಗ ಜಿಲ್ಲಾಡಳಿತಕ್ಕೆ ದೂರುಗಳು ಬರುವುದಿಲ್ಲ. ಸಣ್ಣಪುಟ್ಟ ವಿಷಯಕ್ಕೆ ಸಭೆ ಕರೆದು ನಿಮಗೆ ಪ್ರತೀ ಬಾರಿ ಸೂಚಿಸಲು ಆಗುವುದಿಲ್ಲ. ಗುತ್ತಿಗೆದಾರರು, ಅಧೀನ ಸಿಬ್ಬಂದಿಗಳಿಗೆ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಸಂಬಂಧ ಸಮಸ್ಯೆಗಳಿಗೆ ಸ್ಪಂದಿಸಲು ಸೂಚನೆ ನೀಡಿ, ಕಾರ್ಯನಿರ್ವಹಿಸಿದಾಗ ಮಾತ್ರ ಸಮಸ್ಯೆಗಳು ಬಗೆಹರಿಯುತ್ತವೆ. ಇದಕ್ಕೆ ಒತ್ತು ನೀಡಬೇಕು ಎಂದರು.

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕುಂದು ಕೊರತೆಗೆ ಸಂಬಂಧಿಸಿದಂತೆ ಆನ್‌ಲೈನ್ ಆಪ್ ಅನ್ನು ನಿರ್ವಹಣೆ ಮಾಡುತ್ತಿದ್ದಾರೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಇದಕ್ಕೆ ಸಾರ್ವಜನಿಕರು ಅಪ್‌ಲೋಡ್ ಮಾಡುವುದು ಸೂಕ್ತ ಎಂದ ಅವರು, ಟೋಲ್‌ನ ಸಮೀಪದ 5 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರಿಗೆ ವಿನಾಯಿತಿ ಈ ಹಿಂದೆ ನೀಡಿದ ರೀತಿಯಲ್ಲಿ ನೀಡಲಾಗುತ್ತದೆ. ಆದರೆ ವಾಣಿಜ್ಯ ವಾಹನಗಳಿಗೆ ಇದು ಅನ್ವಯಿಸುವುದಿಲ್ಲ ಎಂದರು.

    Click here

    Click here

    Click here

    Click Here

    Call us

    Call us

    ಬ್ರಹ್ಮಾವರದಲ್ಲಿ ಸರ್ವೀಸ್ ರಸ್ತೆ, ಮೀಡಿಯನ್ ಓಪನಿಂಗ್, ಮೇಲ್ಸೇತುವೆ ವ್ಯವಸ್ಥೆ ಬೇಕು ಎನ್ನುವ ಬಗ್ಗೆ ಸ್ಥಳೀಯ ಜನರು ಮನವಿ ಮಾಡುತ್ತಿದ್ದಾರೆ. ಇವುಗಳನ್ನು ಬಗ್ಗೆ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು, ರಸ್ತೆ ವಿಭಜಕ ತೆರವಿಗೆ, ರಸ್ತೆ ಸುರಕ್ಷತಾ ಸಭೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ವರದಿ ಆಧರಿಸಿ, ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

    ಸಭೆಯಲ್ಲಿ ಭಾಗವಹಿಸಿದ ಸ್ಥಳೀಯ ಪ್ರತಿನಿಧಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡಗಳ ರಿಪೇರಿ, ದಾರಿ ದೀಪಗಳ ನಿರ್ವಹಣೆ, ರಸ್ತೆಯ ಬದಿಯಲ್ಲಿ ಬೆಳೆದಿರುವ ಹುಲ್ಲುಗಳ ತೆರವು, ಪಾದಚಾರಿ ರಸ್ತೆ ನಿರ್ವಹಣೆ, ರಸ್ತೆಯ ಶೋಲ್ಡರ್ ನಿರ್ವಹಣೆ, ಬಿಳಿ ಪಟ್ಟಿ ಬಳಿಯುವುದು ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ತಹಶೀಲ್ದಾರರು, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    thirteen − 3 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.