ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ರಾಷ್ಟ್ರೀಯ ಮಟ್ಟದ ಸ್ಟಾರ್ ಎಜುಕೇಷನ್ ಅವಾರ್ಡ್ ಪ್ರಾಪ್ತಿ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ವಿಶ್ವ ಶ್ರೇಷ್ಟ ಸಾಧನೆಗಳ ಮೂಲಕ ತಾಯ್ನಾಡಿಗೆ ಕೀರ್ತಿಯನ್ನು ತರುತ್ತಿರುವ  ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯು 2024ರ ಸ್ಟಾರ್ ಎಜ್ಯುಕೇಷನ್ ರಾಷ್ಟ್ರೀಯ ಮಟ್ಟದ ಗೌರವ ಪುರಸ್ಕಾರಕ್ಕೆ ಭಾಜನವಾಯಿತು.

Call us

Click Here

ನ26.ರಂದು ಮುಂಬೈಯ ಎಂ ಎಂ ಆರ್ ಡಿ ಎ ಮೈದಾನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಆಡಳಿತಾಧಿಕಾರಿ ವೀಣಾ ರಶ್ಮೀ ಎಂ. ಪಾಲ್ಗೊಂಡು ಪ್ರಶಸ್ತಿಯನ್ನು ಸ್ವೀಕರಿಸಿದರು.

ಮುಂಬೈನ ಎಫ್ ಎಫ್ ಟಿ ಪ್ರೈವೆಟ್ ಲಿಮಿಟೆಡ್‌ನ ನಿರ್ದೇಶಕರಾದ ಅಲಾಖ್ ಸಿಂಗ್ ಪ್ರಶಸ್ತಿಯನ್ನು ವಿತರಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ತರಲಾಗುತ್ತಿರುವ ಕ್ರಾಂತಿಕಾರಿ ಬದಲಾವಣೆಗಳು-ಸುಧಾರಣೆಗಳು, ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, ಪರಿಸರ ಸ್ನೇಹಿ ಕಾರ್ಯಕ್ರಮಗಳು, ಸಮಾಜಕ್ಕೆ ನೀಡಲಾಗುತ್ತಿರುವ ಕೊಡುಗೆಗಳು ಇತ್ಯಾದಿ ಅಂಶಗಳ ಆಧಾರದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.

ಪ್ರಶಸ್ತಿ ಸ್ವೀಕರಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣಕುಮಾರ ಮಾತನಾಡುತ್ತಾ,  ನಮ್ಮ ಸಂಸ್ಥೆಯ ಸಂಸ್ಥಾಪಕರಾದ ವೇದಮೂರ್ತಿ ಹೆಚ್ ರಾಮಚಂದ್ರ ಭಟ್ಟರು ನಾಡಿನ ವಿದ್ಯಾರ್ಥಿ ಸಂಕುಲಕ್ಕೆ ಅತ್ಯುನ್ನತ ಶಿಕ್ಷಣವನ್ನು ಒದಗಿಸಿ, ತನ್ಮೂಲಕ ನಾಡಿನ ಕೀರ್ತಿಯನ್ನು ಎತ್ತರಕ್ಕೇರಿಸುವ ಕನಸನ್ನು ಕಟ್ಟಿದ್ದರು. ಅವರು ಕಟ್ಟಿದ್ದ ಕನಸುಗಳೆಲ್ಲ ನನಸಾಗುವ ಕಾಲ ಸನ್ನಿಹಿತವಾಗುತ್ತಿದೆ. ಸಂಸ್ಥೆಗೆ ರಾಷ್ಟ್ರೀಯ ಮಟ್ಟದ ಗೌರವ ಪ್ರಾಪ್ತವಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

Click here

Click here

Click here

Click Here

Call us

Call us

Leave a Reply