ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಯಡಮೊಗೆ ಗ್ರಾಮದ ತಟ್ಟೆಗುಳಿ ನಿವಾಸಿ ಕುಶಲ (38) ಅವರು ತೆಂಗಿನಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಅವರು ಕೃಷಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ನ.21ರಂದು ತೆಂಗಿನಮರ ಏರಿ ಕಾಯಿ ಕೊಯ್ಯುತ್ತಿರುವ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಚಿಕಿತ್ಸೆಯ ಬಗ್ಗೆ ಅವರನ್ನು ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿ ದ್ದಾರೆ. ಮೃತರ ಸಹೋದರ ಚಂದ್ರ ನೀಡಿದ ದೂರಿನಂತೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.