ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ. ಜಿ ಅವರು ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸುತ್ತಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು, ಸೋಲೇ ಗೆಲುವಿನ ಸೋಪಾನ ಎಂಬ ನುಡಿಯಂತೆ ಪ್ರತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನುಡಿಯುತ್ತಾ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿದರು.
ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಪ್ರಮೀಳಾ ಡಿ’ಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಶ್ರೀನಿಧಿ ಪೈ ಕಾರ್ಯಕ್ರಮ ನಿರೂಪಿಸಿ, ಮದೀಹಾ ಮಸೂದ್ ಸ್ವಾಗತಿಸಿ ಹಾಗೂ ಆಯುಷ್ ರಾವ್ ವಂದಿಸಿದರು.
ಈ ಸಮಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂಧಿ ಹಾಗೂ ಪೋಷಕರು ಭಾಗವಹಿಸಿದ್ದರು.
ಮುಖ್ಯ ಅತಿಥಿಗಳ ಸಮ್ಮುಖದಲ್ಲಿ ಮಕ್ಕಳು ನಡೆಸಿದ ದೈಹಿಕ ಕಸರತ್ತು ಎಲ್ಲರ ಮನಸೂರೆಗೊಂಡಿತು.