ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಡಿ.02: ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿಯಲ್ಲಿಯೂ ಮುಂದಿನ 2 ದಿನಗಳ ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.03ರಂದು ಭಾರಿ ಮಳೆ ಡಿ.04ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸದಸ್ಯರು ಕೇಂದ್ರಸ್ಥಾನದಲ್ಲಿದ್ದು ಸೂಕ್ತ ಮುನ್ನಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಸಾರ್ವಜನಿಕರು ಹಾಗೂ ಮೀನುಗಾರರ ನದಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ವಿದ್ಯುತ್ ಕಂಬ, ತಗ್ಗು ಪ್ರದೇಶ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಿಂದ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿಗಲೂ ಸೂಚಿಸಿದ್ದಾರೆ