ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಶಾಲಾ ಹಾಗೂ ಕಾಲೇಜು ಮಕ್ಕಳು ಕೆರೆ, ನದಿ, ಹಾಗೂ ಕಿಂಡಿ ಆಣೆಕಟ್ಟಿನ ಹಿನ್ನೀರು ಮುಂತಾದ ಪ್ರದೇಶಗಳಲ್ಲಿ ಆಟ ಆಡಲು ಅಥವಾ ಈಜಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣ ಬಿಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮಕ್ಕಳ ಪೋಷಕರು ಇಂತಹ ವಿಷಯಗಳನ್ನು ಗಂಭೀರವಾಗಿ ತೆಗೆದುಕೊಂಡು ಮಕ್ಕಳ ಚಲನವಲನಗಳನ್ನು ಗಮನಿಸಿ, ಸೂಕ್ತ ಎಚ್ಚರಿಕೆ ವಹಿಸಿದ್ದಲ್ಲಿ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.