ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಆಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸಿ, ಅವುಗಳಿಂದ ದೂರವಿರುವ ಹಾಗೇ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

Call us

Click Here

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಮಾನ್ಯವಾಗಿ ಯುವಜನರು ಹೆಚ್ಚು ಮಾದಕ ವಸ್ತುಗಳಿಗೆ ವ್ಯಾಸನಿಗಳಾಗುತ್ತಿದ್ದಾರೆ. ಶಾಲಾ- ಕಾಲೇಜುಗಳಲ್ಲಿ ಅವುಗಳ ಬಳಕೆಯಿಂದ ಆಗುವ ಪರಿಣಾಮಗಳು ಹಾಗೂ ಭವಿಷ್ಯದಲ್ಲಿ ಆಗುವ ಅನಾನುಕೂಲಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಗಿಂದಾಗ್ಗೆ ನಡೆಸುವುದರ ಜೊತೆಗೆ ಪ್ರಬಂಧ ಸ್ಪರ್ಧೆ, ಆಶುಭಾಷಣ ಸ್ಪರ್ಧೆ ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಸಹ ಹಮ್ಮಿಕೊಳ್ಳಬೇಕು ಎಂದರು.

ದುಶ್ಚಟಗಳಿಗೆ ಕಾರ್ಮಿಕರು ಸಹ ಬಲಿಯಾಗುತ್ತಿದ್ದಾರೆ. ಅವರಿಗೂ ಸಹ ಅರಿವು ಮೂಡಿಸುವುದರ ಜೊತೆಗೆ ಸಮಾಲೋಚನೆಗಳನ್ನು ನಡೆಸಿ, ಅವರುಗಳಿಗೆ ಮನಮುಟ್ಟುವ ರೀತಿ ತಿಳಿಸಿ, ದುಶ್ಚಟದಿಂದ ಮುಕ್ತರಾಗಿಸಲು ಮುಂದಾಗಬೇಕು ಎಂದರು.

ಕಾಡಂಚಿನ ಪ್ರದೇಶದಲ್ಲಿ ಹಾಗೂ ಕೆಲವು ತೋಟಗಳಲ್ಲಿ ಗಾಂಜಾಗಳನ್ನು ಬೆಳೆಯುವ ಸಾಧ್ಯತೆ ಇದ್ದು, ಇವುಗಳ ಬಗ್ಗೆ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿಗಳು ನಿರಂತರ ವೀಕ್ಷಣೆಗಳನ್ನು ಕೈಗೊಳ್ಳಬೇಕು ಎಂದ ಅವರು, ಅಂಚೆಯ ಮೂಲಕ ಮಾದಕ ವಸ್ತುಗಳ ಸರಬರಾಜು ಆಗಬಹುದು. ಅಂಚೆ ಇಲಾಖೆಯ ಸಿಬ್ಬಂದಿಗಳು ಅನುಮಾನ ಬಂದಂತಹ ಕವರ್‌ಗಳನ್ನು ಮಾಲಕರ ಸಮ್ಮುಖದಲ್ಲಿ ತೆರೆದು ಪರಿಶೀಲಿಸಬೇಕು. ರೈಲ್ವೆ ಇಲಾಖೆಯ ಸಿಬ್ಬಂದಿಗಳು ಸಹ ನಿಲ್ದಾಣದಲ್ಲಿ ಮಾದಕ ವಸ್ತುಗಳ ಸರಬರಾಜು ಬಗ್ಗೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.

Click here

Click here

Click here

Click Here

Call us

Call us

ಕರಾವಳಿ ಪೊಲೀಸರು ಬೀಚ್‌ಗಳಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆ ಬಗ್ಗೆ ನಿಗಾ ವಹಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಮಾರಾಟವಾಗುವ ಆಹಾರ ಗುಣಮಟ್ಟದ ಸ್ಯಾಂಪಲ್‌ಗಳನ್ನು ತೆಗೆದು ಪ್ರಯೋಗ ಶಾಲೆಗಳಿಗೆ ವಿಶ್ಲೇಷಣೆಗೆ ಕಳುಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ 97 ಕ್ಕೂ ಹೆಚ್ಚು ಮಾದಕ ಸೇವನೆಗಳ ಪ್ರಕರಣಗಳು ದಾಖಲಾಗಿದ್ದು, ಶೇ.90 ರಷ್ಟು ಪ್ರಕರಣಗಳು ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಆಗಿದೆ. ಮಾಹೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ತೆಗೆದುಕೊಳ್ಳಬೇಕು. ಈ ಬಗ್ಗೆ ಕೇರ್ ಟೆಕರ್ಸ್ಗಳನ್ನು ಹೆಚ್ಚು ನಿಯೋಜಿಸಬೇಕು ಹಾಗೂ ನಶಾ ಮುಕ್ತ ಪರಿಸರವನ್ನಾಗಿಸಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮಾಹೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲ ವಿಭಾಗದ ಪೊಲೀಸ್ ಅಧಿಕಾರಿಗಳು ಹಾಸ್ಟೆಲ್‌ಗಳಲ್ಲಿ ಸಿಸಿಟಿವಿ ಅಳವಡಿಸಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಮಾದಕ ವಸ್ತುಗಳ ಬಳಕೆಯ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಇವುಗಳನ್ನು ಉತ್ತೇಜಿಸುವುದು ಕಂಡು ಬಂದಲ್ಲಿ ಅವರುಗಳ ಮೇಲೆ ಕಾನೂನಿನ ಅಡಿಯಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ..ಅರುಣ್ ಕೆ, ಮಾತನಾಡಿ, ಜಿಲ್ಲೆಯ ಹೆದ್ದಾರಿ ಫಲಕಗಳಲ್ಲಿ ಮೌತ್ ಫ್ರೆಶ್ನರ್ ಎಂದು ಹೇಳಿ ತಂಬಾಕು ಉತ್ಪನ್ನಗಳನ್ನು ಜಾಹೀರಾತು ಪಡಿಸಿ, ಮಾರಾಟ ಮಾಡುತ್ತಿದ್ದಾರೆ. ಅಂತಹವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದ ಅವರು, ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಮುಂದಾಗಬೇಕು ಎಂದರು.

ಮಾದಕ ವಸ್ತುಗಳ ವ್ಯಸನ ಹೊಂದುವ ವಿದ್ಯಾರ್ಥಿಗಳಿಗೆ ಮೊದಲು ಒಂದೆರೆಡು ಬಾರಿ ಸೂಚನೆ ನೀಡಿ, ತಮ್ಮ ತಪ್ಪನ್ನು ತಿದ್ದಿಕೊಳ್ಳುವ ಹಾಗೆ ಮನವೊಲಿಸಬೇಕು. ಅದನ್ನು ಮುಂದುವರೆಸಿದರೆ ಅವರನ್ನು ಕಾಲೇಜಿನಿಂದ ತೆಗೆದು ಹಾಕುವುದು ಸೂಕ್ತ ಎಂದರು.

ವಾರದ ಕೊನೆಯ ದಿನಗಳಲ್ಲಿ ಪಾರ್ಟಿಗಳನ್ನು ಆಯೋಜಿಸಿ, ಮೋಜು ಮಸ್ತಿ ನೆಪದಲ್ಲಿ ಮಾದಕ ವಸ್ತುಗಳ ಸೇವನೆಯ ಸಾಧ್ಯತೆ ಇರುತ್ತದೆ. ಅನುಮಾನಾಸ್ಪದ ಬರುವಂತಹ ವಿದ್ಯಾರ್ಥಿಗಳ ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕು. ವಾಣಿಜ್ಯ ಕೇಂದ್ರಗಳು, ಹೊಮ್‌ಸ್ಟೆಗಳು ಹಾಗೂ ಮತ್ತಿತರ ಪ್ರವಾಸಿ ತಾಣಗಳಲ್ಲಿ ಈ ತರಹದ ಚಟುವಟಿಕೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ  ಎ.ಎಸ್.ಪಿ  ಪಿ.ಎ ಹೆಗಡೆ , ಡಿ.ಎಫ್.ಓ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ. ಗಡಾದ್, ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ, ಡಿಡಿಪಿಐ ಗಣಪತಿ, ಡಿಡಿಪಿಯು ಮಾರುತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply