ಗಂಗೊಳ್ಳಿ ಗ್ರಾಮ ಪಂಚಾಯಿತಿ ಚುನಾವಣೆ: 6ರಿಂದ ನಿಷೇಧಾಜ್ಞೆ ಜಾರಿ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿಯ 33 ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣೆ ಆಯೋಗದ ಆದೇಶದಂತೆ ಡಿ.8ರಂದು ಮತದಾನ ನಡೆಯಲಿದೆ.

Call us

Click Here

ಈ ಸಂದರ್ಭ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಡಿ.6ರ ಬೆಳಗ್ಗೆ 6 ಗಂಟೆಯಿಂದ ಡಿ.8ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶದ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

Leave a Reply