ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ರಾಮಮಂದಿರ ರಸ್ತೆಯಲ್ಲಿರುವ ವಿಜಯಾ ಟೆಕ್ಸ್‌ಟೈಲ್ಸ್ ಸಮೀಪ ರಾಘವೇಂದ್ರ (46) ಎಂಬವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಅವರನ್ನು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.