Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ   ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಹೊಸದಾಗಿ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ (ನಿ) ಸ್ಥಾಪನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ ಸ್ಥಾಪನೆಯಿಂದ ಕಾರ್ಮಿಕರು, ಹೊರ ಗುತ್ತಿಗೆದಾರರು, ವಿವಿಧ ಆರ್ಥಿಕ ಲಾಭಗಳನ್ನು ಪಡೆಯಲು ಅನುಕೂಲವಾಗುವ ದರ ಜೊತೆಗೆ ಸರಕಾರದ ವಿವಿಧ ಇಲಾಖೆಗಳು ಹಾಗೂ ಇವುಗಳ ಅಧೀನದಲ್ಲಿ ಬರುವ ನಿಗಮ ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರ ಸೇವೆಗಳನ್ನು ಒದಗಿಸಲು  ಅನುಕೂಲವಾಗಲಿದೆ. ಹೊರಗುತ್ತಿಗೆದಾರರ ವೇತನ ಪಾವತಿ, ಇ.ಎಸ್.ಐ, ಪಿ.ಎಫ್ ಮುಂತಾದ ಶಾಸನಾತ್ಮಕ ಸೌಲಭಗಳನ್ನು ನೌಕರರಿಗೆ ಒದಗಿಸುವ ಮೂಲಕ ಯಾವುದೇ ಸಮಸ್ಯೆಗಳಿಲ್ಲದೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬಹುದಾಗಿದೆ ಎಂದರು.

    ರಾಜ್ಯದಲ್ಲಿ ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಈ ರೀತಿಯ ಸಂಘಗಳನ್ನು ಸ್ಥಾಪಿಸಿ, ಸದರಿ ಸಂಘದ ಮೂಲಕ ಹೊರ ಗುತ್ತಿಗೆ ನೌಕರರನ್ನು ವಿವಿಧ ಇಲಾಖೆಗಳಿಗೆ ನಿಯೋಜಿಸಿದೆ. ಹಾಗೂ ಅವರಿಗೆ ವೇತನ ಸೇರಿದಂತೆ ಮತ್ತಿತರ ಶಾಸನಾತ್ಮಕವಾಗಿ ನೀಡಬೇಕಾದ ಸೇವೆಗಳು ಯಾವುದೇ ಸಂಸ್ಯೆಗಳಿಲ್ಲದೆ ಸರಳವಾಗಿ ನೀಡುವುದರೊಂದಿಗೆ ಯಶಸ್ವಿಯಾಗಿದೆ. ಇದನ್ನು ಈ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಬೇಕು ಎಂದರು.

    ಸಂಘದ ಪ್ರಾರಂಭಕ್ಕೆ ಅಗತ್ಯವಿರುವ ಕಚೇರಿ, ಸಂಘದ ಬೈಲಾ, ಅಡಕ್ ಸಮಿತಿ ಸೇರಿದಂತೆ ಮತ್ತಿತರ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡು ಶೀಘ್ರದಲ್ಲಿಯೇ ಸಂಘ ಸ್ಥಾಪನೆಗೆ ಮುಂದಾಗಬೇಕು ಎಂದ ಅವರು, ಪ್ರಸ್ತುತ ಚಾಲ್ತಿಯಲಿರುವ ಕಾರ್ಮಿಕ ಇಲಾಖೆಗಳ ವಿವಿದ್ದೋದ್ದೇಶ ಸಹಕಾರ ಸಂಘಕ್ಕೆ ಜಿಲ್ಲೆಯ ತಂಡ ಭೇಟಿ ನೀಡಿ, ವೀಕ್ಷಿಸಿ ಮಾಹಿತಿ ಕಲೆ ಹಾಕಬೇಕು ಎಂದರು.

    Click here

    Click here

    Click here

    Call us

    Call us

    ಜಿಲೆಯಲ್ಲಿ ವಿವಿಧ ಇಲಾಖೆಗಳಲ್ಲಿ 2080 ಕ್ಕೂ ಹೆಚ್ಚು ಜನ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುತ್ತಾರೆ ಎಂದ ಅವರು, ಕೆಲವು ಗುತ್ತಿಗೆ ಸಂಸ್ಥೆಗಳು ತಮಗೆ ಸರಿಯಾಗಿ ವೇತನ, ಪಿ.ಎಫ್ ಸೇರಿದಂತೆ ಮತ್ತಿತರ ಕಾನೂನಾತ್ಮಕ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಅನೇಕ ಬಾರಿ ದೂರಿದ್ದಾರೆ. ಈ ರೀತಿಯ ವಿವಿದ್ದೋದ್ದೇಶ ಸಂಘಗಳನ್ನು ಮಾಡಿಕೊಳ್ಳುವುದರಿಂದ ಅನೇಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.

    ವಿವಿದ್ದೋದ್ದೇಶ ಸಹಕಾರ ಸಂಘ ಪ್ರಾರಂಭ ಕುರಿತು ಈಗಾಗಲೇ ಜಿಲ್ಲೆಯ ಅನೇಕ ಸರಕಾರಿ, ನಿಗಮ ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 12 ರಂದು ಸಭೆಯನ್ನು ಕರೆದು ಅವರೊಂದಿಗೆ ಸಾಧಕ-ಬಾಧಕಗಳನ್ನು ಚರ್ಚಿಸಲಾಗುವುದು ಎಂದರು.

    ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ ಗಡದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಬಾಲ ಕಾರ್ಮಿಕ ಸಂಘದ ಯೋಜನಾಧಿಕಾರಿ ಅಮೃತ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು, ತಾಲೂಕು ತಹಶೀಲ್ದಾರ್ ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.