ಮದರ್ ತೆರೇಸಾಸ್ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಆಪ್ತಸಲಹೆ ಕುರಿತು ಕಾರ್ಯಾಗಾರ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ಒಂದು ದಿನದ “ವೃತ್ತಿ ಮಾರ್ಗದರ್ಶನ ಮತ್ತು ಆಪ್ತಸಲಹೆ” ಕಾರ್ಯಾಗಾರ ನಡೆಯಿತು.

Call us

Click Here

ಮದರ್ ತೆರೇಸಾಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶಮಿತಾರಾವ್ ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಷ್ಟೀಯ ಪದವಿ ಪೂರ್ವ ವಿದ್ಯಾರ್ಥಿ,  ಶಿಕ್ಷಕರ ಮತ್ತುಪಾಲಕರ ಸಂಘ ಸ್ಥಾಪಕರಾದ ಮಿತೇಶ್ ಮೂಡುಕೊಣಾಜೆ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗಕೌಶಲ್ಯ ಮತ್ತು ವೃತ್ತಿ ಕೌಶಲ್ಯ ಅಗತ್ಯವಾಗಿದೆ. ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ಬಹು ಕೌಶಲ್ಯ ಕಾರ್ಮಿಕರ ಬೇಡಿಕೆ ಹೆಚ್ಚಾಗಿದೆ. ಭಾರತದಂತಹ ಅಭಿವೃದ್ಧಿಹೊಂದುತ್ತಿರುವ ರಾಷ್ಟ್ರದಲ್ಲಿ ಗುಣಮಟ್ಟದ ಕೌಶಲ್ಲ್ಯಾಭಿವೃದ್ಧಿ ಮತ್ತು ತರಬೇತಿ ಅಗತ್ಯ, ತಮ್ಮವೃತ್ತಿ ಆಯ್ಕೆಗಳನ್ನು ಗುರುತಿಸಲು ಮತ್ತು ಅಪೇಕ್ಷಿತ ವೃತ್ತಿಯನ್ನು ಆಯ್ಕೆಮಾಡಲು ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ಅತೀ ಅವಶ್ಯಕವಾಗಿದೆ ಎಂದು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷಾಮಾಹಿತಿ, ಪರೀಕ್ಷಾದ್ವಂದ್ವಗಳು, ಭವಿಷ್ಯದಲ್ಲಿ ವೃತ್ತಿಯೋಜನೆ, ಕೋರ್ಸ್ಆಯ್ಕೆ, ವೃತ್ತಿಪರಿವರ್ತನೆ, ಸ್ವಯಂನಿರ್ಧಾರ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸವಾಲುಗಳು, ಉದ್ಯೋಗಾವಕಾಶಗಳು ಇತ್ಯಾದಿಗಳ ಕುರಿತು ಹಲವು ಪ್ರಾತ್ಯಕ್ಷಿಕೆಗಳ ಮೂಲಕ ಮನವರಿಕೆ ಮಾಡಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯವನ್ನು ಮೂಡಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಬೋಧಕೇತರ ವರ್ಗ ಉಪಸ್ಥಿತರಿದ್ದರು. ಉಪನ್ಯಾಸಕಿ ಭವ್ಯಶ್ರೀ ಸ್ವಾಗತಿಸಿ, ಶ್ವೇತಾ ವಂದಿಸಿ, ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply