ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘದ ವತಿಯಿಂದ ಅಂಬೇಡ್ಕರ್ ಅವರ 68ನೇ ಪರಿ ನಿವಾ೯ಣ ದಿನವನ್ನು ಪರಿಶಿಷ್ಠ ವರ್ಗದ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಿಸುವುದರ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ರಮೇಶ್ ಡಿಟಿ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ವಿದ್ಯಾರ್ಥಿಗಳಿಗೆ ಹಣ್ಣುಗಳನ್ನು ವಿತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗರತ್ನ ಅವರು ವಹಿಸಿದ್ದರು ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ರಾಜೇಶ್, ಗೀತಾ ಸುರೇಶ್ ಕುಮಾರ್, ರಮೇಶ್ ಮರವಂತೆ, ಶಿವರಾಜ್, ವಿನಯ, ದಯಾನಂದ್. ಪಿ, ಸಂಘದ ಮಹಿಳಾ ಸದಸ್ಯರು ಮತ್ತು ದ.ಸಂ. ಸಮಿತಿ ಸದಸ್ಯರು ವಿದ್ಯಾರ್ಥಿಗಳು ಶಿಕ್ಷಕ ವೃಂದದವರುಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.










