ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಜರಗಿದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ತಲ್ಲೂರಿನ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಮತ್ತು ನಿಕಟಪೂರ್ವ ಅಧ್ಯಕ್ಷ ಎಂ. ನಾಗೇಂದ್ರ ಪೈ ಅವರು ಪ್ರಾರ್ಥನಾ ಪೈ ಅವರನ್ನು ಸನ್ಮಾನಿಸಿ ಗೌರವಿಸಿದರು.
ಮುಖ್ಯ ಅತಿಥಿಯಾಗಿ ಜೋನಲ್ ಲೆಫ್ಟಿನೆಂಟ್ ಪ್ರದೀಪ್ ಡಿ.ಕೆ., ಗಂಗೊಳ್ಳಿ ರೋಟರಿ ಮಾಜಿ ಅಧ್ಯಕ್ಷ ಉಮೇಶ ಎಲ್. ಮೇಸ್ತ, ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ, ಪತ್ರಕರ್ತ ಬಿ. ರಾಘವೇಂದ್ರ ಪೈ, ರಾಧಿಕಾ ಆರ್.ಪೈ, ಗಂಗೊಳ್ಳಿ ರೋಟರಿ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.










