ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಬಾಲ್ಯವಿವಾಹ ಅರಿವು ಕಾರ‍್ಯಕ್ರಮ

Call us

Call us

Call us

ಗಂಗೊಳ್ಳಿ: ಬಾಲ್ಯ ವಿವಾಹ ಮತ್ತು ಅದರಿಂದಾಗುವ ದುಷ್ಪರಿಣಾಮಗಳೇನು ಎನ್ನುವುದರ ಬಗೆಗಿನ ಪ್ರಾಥಮಿಕ ಅರಿವು ಪ್ರತಿಯೊಬ್ಬರಲ್ಲೂ ಇರಬೇಕು. ಮತ್ತು ಆ ಕುರಿತಾದ ಕಾನೂನು ಜಾಗೃತಿಯನ್ನು ಸಮಾಜದ ಎಲ್ಲಾ ವರ್ಗದ ಜನರಲ್ಲೂ ಮೂಡಿಸುವಲ್ಲಿ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ವಕೀಲ ಉಮೇಶ್ ಶೆಟ್ಟಿ ಅವರು ಹೇಳಿದರು.

Call us

Click Here

ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭೀವೃದ್ಧಿ ಇಲಾಖೆ,ಶಿಶು ಅಭಿವೃದ್ಧಿ ಸೇವಾ ಯೋಜನೆ ಕುಂದಾಪುರ,ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯವಿವಾಹ ನಿಷೇಧ ಕುರಿತಂತೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಕಾರ‍್ಯಕ್ರಮದಲ್ಲಿ ಮಾತನಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸದಾನಂದ ನಾಯಕ ಅವರು ಬಾಲ್ಯ ವಿವಾಹ ನಿಷೇಧದ ಕುರಿತಂತೆ ವಿವರವಾದ ಮಾಹಿತಿಯನ್ನು ನೀಡಿದರು. ಸರಸ್ವತಿ ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ರಾಘವೇಂದ್ರ ಭಟ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ‍್ಯಕ್ರಮ ನಿರ್ವಹಿಸಿದರು. ನವ್ಯಶ್ರೀ ಪ್ರಾರ್ಥಿಸಿದರು.ರಮಿತ್ ಧನ್ಯವಾದ ಅರ್ಪಿಸಿದರು.

ವರದಿ: ನರೇಂದ್ರ ಎಸ್ ಗಂಗೊಳ್ಳಿ.

Leave a Reply