ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಲೆನ್ಸ್ ಅವಾರ್ಡ್ಸ್ ಗೌರವ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಗಿನ್ನೆಸ್ ವಿಶ್ವದಾಖಲೆಯನ್ನು ಸೃಷ್ಟಿಸಿರುವ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯು ಬ್ರೈನ್ ಪೀಡ್ ಸಂಸ್ಥೆ ಅವರು ಕೊಡಮಾಡುವ ಅತ್ಯುತ್ತಮ ಸಹಪಠ್ಯ ಚಟುವಟಿಕೆಗಳು, ಅತ್ಯುತ್ತಮ ಬೋರ್ಡಿಂಗ್ ಶಾಲೆ, ಶಿಕ್ಷಣದಲ್ಲಿ ಜೀವನ ಕೌಶಲ್ಯಗಳ ಸಹಭಾಗಿತ್ವ ಈ ಮೂರು ಪ್ರತಿಷ್ಠಿತ ಶ್ರೇಣಿಗಳಲ್ಲಿ 2024-25ನೇ ಸಾಲಿನ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಲೆನ್ಸ್ ಅವಾರ್ಡ್ಸ್ ಪಡೆದುಕೊಂಡಿತು.

Call us

Click Here

ಪ್ರಶಸ್ತಿ ಪ್ರದಾನ ಸಮಾರಂಭವು ಡಿ.6ರಂದು ಹೈದ್ರಾಬಾದ್‌ನ ಹಿಟೆಕ್ಸ್‌ನಲ್ಲಿ  ನಡೆದಿದ್ದು, ಶಾಲೆಯ ಸಂಯೋಜಕರಾದ ಸವಿತಾ ಭಟ್ ಶಾಲೆಯ ವತಿಯಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ “ನಮ್ಮ ಶಾಲೆಯು ನೀಡುತ್ತಿರುವ ಅತ್ಯದ್ಭುತ ಶೈಕ್ಷಣಿಕ ಕೊಡುಗೆಗಳಿಗೆ ಸಂದ ಗೌರವವಿದಾಗಿದ್ದು, ನಾವು ನಮ್ಮಯ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ಅವರಿಗೆ ಅತ್ಯಾವಶ್ಯಕವಾದ ಜೀವನ ಕೌಶಲ್ಯಗಳನ್ನು ಕಲಿಸಿಕೊಡುವಲ್ಲಿ ವಿಶೇಷ ಪ್ರಾಧಾನ್ಯತೆಯನ್ನು ನೀಡುತ್ತಿದ್ದೇವೆ. ಈ ಗೌರವ ನಮ್ಮೆಲ್ಲರಿಗೆ ಹೆಮ್ಮೆ ತಂದಿದೆ. ಶಾಲೆಯ ಈ ಗುರುತರ ಸಾಧನೆಗೆ ನಮ್ಮ ಪ್ರಾಂಶುಪಾಲರಾದ ಶರಣ ಕುಮಾರರ ಸಮರ್ಥ ನಾಯಕತ್ವ ಮತ್ತು ಮಾರ್ಗದರ್ಶನ, ಆಡಳಿತಾಧಿಕಾರಿಗಳಾದ ವೀಣಾ ರಶ್ಮಿಯವರ ಬೆಂಬಲ ಹಾಗೂ ಆಡಳಿತ ಮಂಡಳಿಯವರ ಸಹಕಾರವೇ ಕಾರಣವಾಗಿದ್ದು, ಅವರೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇದು ನಮ್ಮ ಶಾಲೆಯ ಶ್ರಮ ಮತ್ತು ಸಮರ್ಪಣೆಯ ದ್ಯೋತಕವಾಗಿದ್ದು ಈ ಪ್ರಶಸ್ತಿಯನ್ನು ಸ್ವೀಕರಿಸುವುದು ನನಗೆ ಗೌರವದ ವಿಚಾರವಾಗಿದೆ.” ಎಂದರು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಸಂಸ್ಥೆಗೆ ದೊರೆತ ಈ ಪ್ರತಿಷ್ಠಿತ ಪ್ರಶಸ್ತಿಯ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.

Leave a Reply