ಶಯದೇವಿಸುತೆ ಮರವಂತೆ ಅವರಿಗೆ ಕರ್ನಾಟಕ ಸಾಧಕ ರತ್ನ ಪ್ರಶಸ್ತಿ ಪ್ರದಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ಮಹಾದೇವ ಎಜುಕೇಷನ್, ಆರ್ಟ್ & ಕಲ್ಚರಲ್ ಟ್ರಸ್ಟ್ ರಿ. ಬಳ್ಳಾರಿ, ಜೆ.ಟಿ. ಫೌಂಡೇಷನ್ ಮತ್ತು ಶ್ರೀ ಎಸ್.ಆರ್.ಎಂ. ಸೇವಾ ಸಂಸ್ಥೆ ರಿ. ಬಳ್ಳಾರಿ ಹಾಗೂ ಅಖಿಲ ಕರ್ನಾಟಕ ಕನ್ನಡ ರಾಜ್ಯೋತ್ಸವ ಸಮಿತಿ ಬಳ್ಳಾರಿ – ಇವರ ಸಹಯೋಗದಲ್ಲಿ ಬಳ್ಳಾರಿಯ ಡಾ. ಜೋಳದರಾಶಿ ದೊಡ್ಡನಗೌಡರ ರಂಗಮಂದಿರದಲ್ಲಿ ನಡೆದ “ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ”ದಲ್ಲಿ ಶಯದೇವಿಸುತೆ, ಮರವಂತೆ(ಜ್ಯೋತಿ ಜೀವನ್‌ಸ್ವರೂಪ್) ಅವರಿಗೆ “ಕರ್ನಾಟಕ ಸಾಧಕ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಯಿತು.

Call us

Click Here

ಶಯದೇವಿಸುತೆ, ಮರವಂತೆ(ಜ್ಯೋತಿ ಜೀವನ್‌ಸ್ವರೂಪ್) ಅವರಿಗೆ “ಕರ್ನಾಟಕ ಸಾಧಕ ರತ್ನ” ಎಂಬ ಮಹೋನ್ನತ ಪ್ರಶಸ್ತಿ ಯನ್ನು ಬಸವ ಕಲ್ಯಾಣ ಸಂಸ್ಥಾನ ಗವಿಮಠದ ಸ್ವಾಮೀಜಿ ಪೂಜ್ಯ ಡಾ. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯ ಗುರುವರ್ಯರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಸಕಲ ಗಣ್ಯಾತಿ-ಗಣ್ಯ ಮಹನೀಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.

ಶಯದೇವಿಸುತೆ ಮರವಂತೆಯವರು ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ಪತ್ರಿಕೋದ್ಯಮ ಹೀಗೆಯೇ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಇವರು ಕ.ಜಾ.ಪ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply