ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕೋಟೇಶ್ವರದ ಹಾಲಾಡಿ ಮಾರ್ಗದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಗುಲ್ವಾಡಿ ಗ್ರಾಮದ ನಿವಾಸಿ ಶಶಿಧರ (56) ಮೃತಪಟ್ಟಿದ್ದಾರೆ.
ಶಶಿಧರ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಚಾಲಕ ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಅತೀ ವೇಗ ಚಾಲನೆ ಮಾಡಿಕೊಂಡು ತೀರ ಎಡಕ್ಕೆ ಚಲಾಯಿಸಿ ರಸ್ತೆ ದಾಟಲು ನಿಂತಿದ್ದ ಶಶಿಧರ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭಿರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷೀಸಿದ ವೈದ್ಯರು ಮೃತಪಟ್ಟಿರುದಾಗಿ ತಿಳಿಸುತ್ತಾರೆ.
ಈ ಬಗ್ಗೆ ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.