ಜಿಲ್ಲೆಯಲ್ಲಿ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟ ಸ್ಪರ್ಧೆಗಳು ಜನವರಿಯಲ್ಲಿ ನಡೆಯಲಿದೆ: ಜಿಲ್ಲಾಧಿಕಾರಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟಗಳು 2025ರ  ಜ. 16 ರಿಂದ 23ರವರೆಗೆ ನಡೆಯಲಿದ್ದು, ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳಿಂದ  ಕ್ರೀಡಾಪಟುಗಳು ಆಗಮಿಸಿ ಭಾಗವಹಿಸಲಿದ್ದಾರೆ. ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಒಲಂಪಿಕ್ಸ್  ಗೇಮ್ಸ್‌ಗಳನ್ನು ಉಡುಪಿ ಜಿಲ್ಲೆಯಲ್ಲಿ ಸಂಘಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 13 ಕ್ಕೂ ಹೆಚ್ಚು ಕ್ರೀಡೆಗಳು 8 ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಮಾಹೇಯ ವಿ.ವಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, 3500 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.

ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ಆಗಮಿಸುವ ಕ್ರೀಡಾಪಟುಗಳಿಗೆ, ಅಧಿಕಾರಿಗಳಿಗೆ ಹಾಗೂ ತೀರ್ಪುಗಾರರು ಸೇರಿದಂತೆ ಮತ್ತಿತರರಿಗೆ ತಂಗಲು ಅವಶ್ಯವಿರುವ ವಸತಿ ಸೌಕರ್ಯಗಳನ್ನು, ಊಟೋಪಚಾರದ ವ್ಯವಸ್ಥೆಗಳು ಸೇರಿದಂತೆ ಮತ್ತಿತರ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.

ಕ್ರೀಡಾಕೂಟಗಳು ಕೆಲವು ಮಂಗಳೂರು ಜಿಲ್ಲೆಯಲ್ಲಿ ಹಾಗೂ ಕೆಲವು ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ. ಇದರ ಉದ್ಘಾಟನೆ ನಡೆಯಲಿದ್ದು, ಮಾನ್ಯ ಮುಖ್ಯ ಮಂತ್ರಿಗಳು ಸೇರಿದಂತೆ ಸಚಿವರು ಹಾಗೂ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

Click here

Click here

Click here

Click Here

Call us

Call us

ಮಾಹೆಯ ವಿ.ವಿ ಕ್ರೀಡಾಂಗಣದಲ್ಲಿ ಲಾನ್ ಟೆನ್ನಿಸ್, ಟೇಬಲ್ ಟೆನ್ನಿಸ್,ಬ್ಯಾಡ್ಮಿಂಟನ್, ಹಾಕಿ, ಕ್ರೀಡೆಗಳು ನಡೆಯಲಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬ್ಯಾಸ್ಕೆಟ್ ಬಾಲ್, ಕಬಡ್ಡಿ,  ಟೈಕೊಂಡ, ವಾಲಿಬಾಲ್, ಸೇರಿದಂತೆ ಮತ್ತಿತರ  ಕ್ರೀಡೆಗಳು ನಡೆಯಲಿವೆ. ಕ್ರೀಡೆಗೆ ಅನುಗುಣವಾಗಿ ಮೈದಾನವನ್ನು ವ್ಯವಸ್ಥಿತವಾಗಿ ಸಜ್ಜುಗೊಳಿಸಬೇಕು. ಕ್ರೀಡಾಪಟುಗಳಿಗೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳಲು ಮುಂದಾಗಬೇಕು ಎಂದರು.

ಕ್ರೀಡೆಗಳನ್ನು ಯಶಸ್ವಿಯಾಗಿ ನಡೆಸಲು ಉಪ ಸಮಿತಿಗಳನ್ನು ರಚಿಸಬೇಕು ಹಾಗೂ ಸ್ವಯಂ ಸೇವಕರನ್ನು ಸಹ ನಿಯೋಜಿಸಿ ಶಿಸ್ತು ಬದ್ಧವಾಗಿ ಕ್ರೀಡಾಕೂಟಗಳನ್ನು ನಡೆಸಬೇಕು. ಇದಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದರು.

ಕೆಲವು ವಸತಿ ನಿಲಯಗಳಲ್ಲಿ, ಲಾಡ್ಜ್ ಗಳಲ್ಲಿ ಕ್ರೀಡಾ ಪಟುಗಳು ತಂಗಲಿದ್ದು, ಅವರುಗಳು ಅಲ್ಲಿಂದ ಕ್ರೀಡಾ ಸ್ಥಳಕ್ಕೆ ತೆರಳಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆ ಗಳನ್ನು ಮಾಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಡಿಡಿಪಿಐ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು

Leave a Reply