ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಕೃಷಿ ಇಲಾಖೆಯ ವತಿಯಿಂದ ಡಿಸೆಂಬರ್ 12 ರಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಕಾರಣಾಂತರಗಳಿಂದ ಮುಂದೂಡಿ, ಡಿಸೆಂಬರ್ 13 ರಂದು ಮರು ನಿಗಧಿಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ, ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಡಿ. 13 ರಂದು ಬೆಳಗ್ಗೆ 11 ಗಂಟೆಗೆ ಪ್ರದರ್ಶಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ತಯಾರಿಸುವ ಖಾದ್ಯ, ಬೇಕಾಗುವ ಸಾಮಾಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 11 ರ ಒಳಗಾಗಿ ಇ-ಮೇಲ್ ವಿಳಾಸ agrijdaudupi@gmail.com ಅಥವಾ ಖುದ್ದಾಗಿ / ಪೋಸ್ಟ್ ಮೂಲಕ ಜಂಟಿ ಕೃಷಿ ನಿರ್ದೇಶಕರ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.