ಉಡುಪಿ: ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023 ನೇ ಕ್ಯಾಲೆಂಡರ್ ವರ್ಷದಲ್ಲಿ 2023 ರ ಜನವರಿ 01 ರಿಂದ ಡಿಸೆಂಬರ್ 31 ರ ಅವಧಿಯಲ್ಲಿ ಅಂತ ರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಕ್ರೀಡಾಪಟುಗಳು ತಮ್ಮ ಪ್ರಸ್ತಾವನೆಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply