ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯ ಇಲಾಖೆ ಭಾರತ ಸರ್ಕಾರ ಇವರ ವತಿಯಿಂದ ನಡೆದ ಕಲಾ ಉತ್ಸವ 2024-25ನೇ ಸಾಲಿನ ಜಿಲ್ಲಾ ಮಟ್ಟದ ವಾದ್ಯ ಸಂಗೀತದಲ್ಲಿ (ಕೊಳಲು) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ಯಾಮ್ ಜಿ.ಎನ್. ಪೂಜಾರಿ ಅವರು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಈತ ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ಅವರ ಪುತ್ರ.