ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇಂದ್ರ ಸರ್ಕಾರ ಆಯೋಜಿಸಿದ ರಾಷ್ಟ್ರೀಯ ಕಲೋತ್ಸವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಏಕಪಾತ್ರಾಭಿನಯ ವಿಭಾಗದಲ್ಲಿ ಸ್ವಾತಂತ್ರ ಸೇನಾನಿ, ಕ್ರಾಂತಿವೀರ ಶ್ರೀ ಭಗತ್ ಸಿಂಗ್ ಅವರ ಪಾತ್ರವನ್ನು ಅಭಿನಯಿಸಿ ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.