ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿಗೆ ಹಿರಿಯ ಕನ್ನಡ ಸಂಶೋಧಕರಾದ ಡಾ. ಬಿ.ಎ. ವಿವೇಕ ರೈ ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ವತಿಯಿಂದ ಕಳೆದ ಕೆಲವು ವರ್ಷಗಳಿಂದ ನಾಡಿನ ಶಿಕ್ಷಣ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿಗೆ ಈ ಬಾರಿ ಹಿರಿಯ ಕನ್ನಡ ಸಂಶೋಧಕ, ವಿಮರ್ಶಕ, ಅನುವಾದಕ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿ. ಅಪ್ಪಣ್ಣ ಹೆಗ್ಡೆ ಜನ್ಮ ದಿನೋತ್ಸವ- 90 ಸಮಿತಿಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಮತ್ತು ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಅಧ್ಯಕ್ಷರಾದ ರಾಮ್‌ ಕಿಶನ್ ಹೆಗ್ಡೆ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Call us

Click Here

ಕಳೆದ ಆರು ದಶಕಗಳಿಂದ ಅಧ್ಯಯನ, ಅಧ್ಯಾಪನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಡಾ. ಬಿ.ಎ. ವಿವೇಕ ರೈ ಅವರು ಕನ್ನಡ ಹಾಗೂ ತುಳು ಭಾಷೆಯ ಅಭಿವೃದ್ಧಿಗಾಗಿ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಯದ ಮಂಗಳೂರು ಸ್ನಾತಕ್ಕೋತ್ತರ ಕೇಂದ್ರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ವಿಭಾಗದಲ್ಲಿ ಉಪನ್ಯಾಸಕ, ರೀಡರ್, ಪ್ರಾಧ್ಯಾಪಕ ಹಾಗೂ ವಿಭಾಗ ಮುಖ್ಯಸ್ಥರಾಗಿ 34 ವರ್ಷಗಳ ಕಾಲ ಅಧ್ಯಾಪನ ಹಾಗೂ ಸಂಶೋಧನಾ ವೃತ್ತಿಗಳಲ್ಲಿ ತೊಡಗಿಸಿಕೊಂಡಿದ್ದರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ, ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸ್ಥಾಪಕ ಅಧ್ಯಕ್ಷರಾಗಿ, ಜರ್ಮನಿಯ ವ್ಯೂತ್ಸ್‌ ಬುರ್ಗ್ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸಾಂಸ್ಕೃತಿಕ, ಕಲಾ ಅಭಿವೃದ್ಧಿಗಾಗಿ ಕೊಡುಗೆ ನೀಡಿದ್ದಾರೆ. 27ಕ್ಕಿಂತಲೂ ಹೆಚ್ಚು ಕೃತಿಗಳು, 5 ಇಂಗ್ಲೀಷ್ ಗ್ರಂಥಗಳು, ಅನುವಾದ ಗ್ರಂಥಗಳು, ಸಂಪಾದನೆ ಗ್ರಂಥಗಳು, ವಿದೇಶ ಪ್ರವಾಸ ಕಥನಗಳು, ಬ್ಲಾಗ್ ಬರಹಗಳು, ಅಂಕಣಗಳು ಸೇರಿ ಅಕ್ಷರಮುದ್ರೆಯ ಸಾಂಸ್ಕೃತಿಕ ಹಾಗೂ ಜನಪದ ಕ್ಷೇತ್ರಕ್ಕೆ ಸ್ಮರಣೀಯ ಕೊಡುಗೆ ನೀಡಿದ್ದಾರೆ.

ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಸಾಹಿತ್ಯ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗಳು ಸೇರಿದಂತೆ 20 ಕ್ಕೂ ಹೆಚ್ಚು ಪ್ರತಿಷ್ಠಿತ ಪ್ರಶಸ್ತಿಗಳು ಅವರ ಮಡಿಲನ್ನು ಸೇರಿದೆ. ಆಳ್ವಾಸ್ ವಿಶ್ವನುಡಿಸಿರಿ ವಿರಾಸತ್ ಸಮ್ಮೇಳನ, ಕರ್ನಾಟಕ ಜಾನಪದ ಸಮ್ಮೇಳನ, ಕರ್ನಾಟಕ ಸಂಸ್ಕೃತಿ ಸಮ್ಮೇಳನ, ಕರ್ನಾಟಕ ದೇಸಿ ಸಮ್ಮೇಳನ ಹಾಗೂ ಕುವೈತ್ ತುಳು ಸಮ್ಮೇಳನ ಸೇರಿದಂತೆ ಅನೇಕ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಸಮ್ಮೇಳನಗಳ ಘನತೆ ಹೆಚ್ಚಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಸುಮಾರು ಆರು ದಶಕಗಳ ಅನುಪಮ ಸೇವೆಯನ್ನು ಗುರುತಿಸಿ ಡಾ. ಬಿ.ಎ.ವಿವೇಕ ರೈ ಅವರಿಗೆ ಈ ಬಾರಿಯ ಬರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿಯನ್ನು ಡಿಸೆಂಬರ್ 24 ರಂದು ಸಂಜೆ 6 ಕ್ಕೆ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನ ಆವರಣದಲ್ಲಿ ನಡೆಯುವ ಬಿ. ಅಪ್ಪಣ್ಣ ಹೆಗ್ಡೆ-90 ಕಾರ್ಯಕ್ರಮದಲ್ಲಿ ಗಣ್ಯರ ಹಾಗೂ ಆಮಂತ್ರಿತರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Click here

Click here

Click here

Click Here

Call us

Call us

Leave a Reply