Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೃಹರಕ್ಷಕರಿಂದ ಸಮಾಜಕ್ಕೆ ನಿಸ್ವಾರ್ಥ ಸೇವೆ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಗೃಹರಕ್ಷಕರಿಂದ ಸಮಾಜಕ್ಕೆ ನಿಸ್ವಾರ್ಥ ಸೇವೆ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಪ್ರಕೃತಿಕ ವಿಕೋಪ ಸೇರಿದಂತೆ ಮುಂತಾದ ತುರ್ತು ಸಂದರ್ಭದಲ್ಲಿ ಗೃಹರಕ್ಷಕದಳದ ಸಿಬ್ಬಂದಿಗಳು ತಮ್ಮ ಜೀವವನ್ನು ಪಣಕಿಟ್ಟು ತಕ್ಷಣ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಮಾಜಕ್ಕೆ ನಿಸ್ವಾರ್ಥ ಸೇವೆ ನೀಡುತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಇಂದು ನಗರದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿದರು.

    ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಯ ಜೊತೆಗೂಡಿ, ಅವರಿಗೆ ಸಹಕಾರ ನೀಡಿ, ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ ಕಾರ್ಯ ಶ್ಲಾಘನೀಯ ಎಂದ ಅವರು, ಮುಂದಿನ ದಿನಗಳಲ್ಲಿ ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಇದೇ ರೀತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆಗಳನ್ನು ನೀಡುವಂತೆ ತಿಳಿಸಿದರು.  

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮಾತನಾಡಿ, ಗೃಹರಕ್ಷಕ ದಳವು ಪೊಲೀಸ್ ಇಲಾಖೆಯ ಒಂದು ಪ್ರಮುಖ ಅಂಗವಾಗಿದ್ದು, ಬೇರೆ ಇಲಾಖೆಯನ್ನು ಹೋಲಿಸಿದರೆ ಗೃಹ ರಕ್ಷಕದಳ ಇಲಾಖೆಯು ಪೊಲೀಸ್ ಇಲಾಖೆಯನ್ನು ಅತಿ ಸಮೀಪದಿಂದ ತಿಳಿದಿದೆ. ಯಾವುದೇ ಸಮಯದಲ್ಲಾದರೂ ಪೊಲೀಸ್ ಇಲಾಖೆಯ ಕೆಲಸಗಳಿಗೆ ಗೃಹರಕ್ಷಕರು ಸಹಕಾರ ನೀಡುತ್ತಿದ್ದಾರೆ ಎಂದರು.

    ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟ ಡಾ. ರೋಶನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ವಾರ್ಷಿಕ ವರದಿ ವಾಚಿಸಿ ಮಾತನಾಡಿ, ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಮುಂದಿನ ದಿನಗಳಲ್ಲಿ ಬೀಚ್‌ಗಳಲ್ಲಿ ಪ್ರವಾಸಿಗರ ಜೀವರಕ್ಷಕರ ಸೇವೆಯಲ್ಲಿ ಕಾರ್ಯನಿರ್ವಹಿಸಲು ನಿಯೋಜಿಸಲಾಗುವುದು ಎಂದ ಅವರು, ಪ್ರತಿಯೊಬ್ಬರೂ ಶಿಸ್ತು, ಬದ್ಧತೆಯಿಂದ ತಮಗೆ ಸೂಚಿಸುವ ಕಾರ್ಯವನ್ನು ನಿರ್ವಹಿಸಿ, ಸಂಸ್ಥೆಗೆ ಉತ್ತಮ ಹೆಸರನ್ನು ತರಬೇಕು ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ಅಂಗವಾಗಿ ಗೃಹರಕ್ಷಕ ದಳ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾರ್ಕಳ ಘಟಕದ ಶಿವಪ್ರಸಾದ್, ಬ್ರಹ್ಮಾವರ ಘಟಕದ ವಿಜಯ ಕುಮಾರ್, ಉಡುಪಿ  ಘಟಕದ ಪೂರ್ಣಿಮಾ ಹಾಗೂ ಮಣಿಪಾಲ ಘಟಕದ ವಿಲ್ಮಾ ಜ್ಯೋತಿ ರೊಡ್ರೆಗಸ ಅವರನ್ನು ಸನ್ಮಾನಿಸಲಾಯಿತು.

    ಜಿಲ್ಲಾ ಗೃಹರಕ್ಷಕ ದಳ ಕಛೇರಿಯ ಅಧೀಕ್ಷಕ ರತ್ನಾಕರ್ ಎಂ. ಸನ್ಮಾನಿತರ ವಿವರ ವಾಚಿಸಿದರು.

    ಜಿಲ್ಲೆಯ ವಿವಿಧ ಘಟಕಗಳ ಗೃಹ ರಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕದಳದ ಸೆಕೆಂಡ್ ಇನ್ ಕಮಾಂಡ್ ಕೆ.ಸಿ. ರಾಜೇಶ್ ಸ್ವಾಗತಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ಟೀವಸ್ ಪ್ರಕಾಶ್ ಲೂವಿಸ್ ನಿರೂಪಿಸಿ, ಕಾರ್ಕಳ ಘಟಕದ ಪ್ಲಟೂನ್ ಕಮಾಂಡರ್ ಪ್ರಭಾಕರ ಸುವರ್ಣ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026
    Leave A Reply Cancel Reply

    four × two =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.