ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ವಿದ್ಯಾರ್ಥಿಗಳಿಗೆ ಜೀವನ ನಿಮ್ಮ ಕೈಯಲ್ಲಿರುವುದರಿಂದ ಆತ್ಮ ವಿಶ್ವಾಸವನ್ನು ಕಳೆದುಕೊಳ್ಳದೇ ಚಿಕ್ಕ ಚಿಕ್ಕ ಕನಸು ಕಾಣುವುದನ್ನು ಬಿಟ್ಟು ದೊಡ್ಡ ದೊಡ್ಡ ಕನಸು ಕಾಣುವ ಮೂಲಕ ವಿಭಿನ್ನ ಯೋಚನೆ, ಪ್ರಯತ್ನದ ಮೂಲಕ ಸಾಧನೆ ಮಾಡುವ ಮನಸ್ಸು ನಿಮ್ಮದಾಗಲಿ ಎಂದು ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಅವರು ಹೇಳಿದರು.
ಅವರು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ನ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ ಯಶಸ್ವಿ ಬದುಕನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಶ್ರೀ ವೆಂಕಟರಮಣ ಸಂಸ್ಥೆಯ ಅಭಿವೃದ್ಧಿ ಪಥದ ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಟ್ರಸ್ಟಿ ರತ್ನಾಕರ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಸಂದೀಪ್ ಗಾಣಿಗ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ವೈಷ್ಣವಿ ಆರ್. ಕೆ ಸ್ವಾಗತಿಸಿದರು. ಕ್ಷಮಾ ಶೆಟ್ಟಿ ವಂದಿಸಿ, ರಕ್ಷಾ ಶೆಣೈ ಅತಿಥಿಯನ್ನು ಪರಿಚಯಿಸಿದರು. ಕೆ .ಶ್ರೀನಿತಾ. ಎಸ್. ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.