ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರಸಾಲ – ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್ಸೈಟ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574884 ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.