ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕಚೇರಿ ಹಾಗೂ ಕೊಠಡಿಗಳ ಬೀಗ ಒಡೆದು 3 ಎನ್‌ವಿಆರ್ ಕೆಮರಾಗಳನ್ನು ಯಾರೋ ಕಳ್ಳರು ಕದ್ದೊಯ್ದ ಘಟನೆ ಡಿ. 15ರ ಸಂಜೆ ಹಾಗೂ ಡಿ. 16ರ ಬೆಳಿಗ್ಗೆ ನಡೆದಿದೆ.
ಕಳವಾದ ಸೊತ್ತಿನ ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










