ಪ್ರವಾಸೋದ್ಯಮ ಕೌಶಲ್ಯಾಭಿವೃದ್ಧಿ ತರಭೇತಿ: ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ (ಈಅI) ಮೈಸೂರು ಹಾಗೂ ಇನ್ಸಿಟಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (Iಊಒ) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ತರಬೇತಿ ವಿವರ: ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -100 ಹಾಗೂ ಪರಿಶಿಷ್ಟ ಪಂಗಡದ – 49 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ರೂಮ್ ಅಟೆಂಡೆಂಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ – 30 ಹಾಗೂ ಪರಿಶಿಷ್ಟ ಪಂಗಡದ – 19 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಐದನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ – 15 ಹಾಗೂ ಪರಿಶಿಷ್ಟ ಪಂಗಡದ – 5 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಠ ದ್ವಿತೀಯ ಪಿ.ಯು.ಸಿ ಉತ್ತೀರ್ಣ ಹಾಗೂ ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳ ಗುರಿ – 147 ಹಾಗೂ ಪರಿಶಿಷ್ಟ ಪಂಗಡದ – 89 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply