ಅಂಬೇಡ್ಕರ್ ವಿರುದ್ಧ ಅವಹೇಳನ: ಗೃಹ ಸಚಿವ ಅಮಿತ್ ಶಾ ವಿರುದ್ಧ ಬೈಂದೂರು ಕಾಂಗ್ರೆಸ್ ಪ್ರತಿಭಟನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ಲೋಕಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಗೂ ಉಡುಪಿ ಜಿಲ್ಲೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಸದನದಲ್ಲಿ ಅವಾಚ್ಯ ಪದ ಬಳಕೆ ಮಾಡಿದ ಶಾಸಕ ಸಿ.ಟಿ. ರವಿ ವಿರುದ್ಧ ಬೈಂದೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಸಮಿತಿ, ಎಸ್.ಸಿ ಘಟಕ ಹಾಗೂ ಕಿಸಾನ್ ಘಟಕ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

Call us

Click Here

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಬಿಜೆಪಿ ನಾಯಕರ ನಡೆಯನ್ನು ಖಂಡಿಸಿದರು. ಈ ವೇಳೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಪೂಜಾರಿ, ಮಾಜಿ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೂರ್ಯಕಾಂತಿ, ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಎಸ್.ಸಿ. ಘಟಕದ ಅಧ್ಯಕ್ಷ ಮಂಜುನಾಥ ನಾಗೂರು, ಮುಖಂಡರುಗಳಾದ ಮೋಹನ್ ಪೂಜಾರಿ, ರಘುರಾಮ ಪೂಜಾರಿ, ಭರತ್ ದೇವಾಡಿಗ, ಉದಯ ಪೂಜಾರಿ, ಸೂರಜ್ ಪೂಜಾರಿ, ಸುಬ್ರಹ್ಮಣ್ಯ ಪೂಜಾರಿ, ತಬ್ರೇಜ್ ನಾಗೂರು, ಲಕ್ಷ್ಮಣ ಬೈಂದೂರು, ಮಾಣಿಕ್ಯ ಹೋಬಳಿದಾರ್, ನಾಗರಾಜ್ ಉಪ್ಪುಂದ ಮೊದಲಾದವರು ಉಪಸ್ಥಿತರಿದ್ದರು.

Leave a Reply