ಕುಂದಾಪುರ: ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಕಳ್ಳರು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಡಿ.22:
ನಗರದ ವಿಠಲವಾಡಿಗೆ ತೆರಳುವ ಮಾರ್ಗದ ಮನೆಯೊಂದರಲ್ಲಿ ರಾತ್ರಿ‌ ವೇಳೆ ಯಾರೂ ಇಲ್ಲದ ಸಂದರ್ಭ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

Call us

Click Here

ಕುಂದಾಪುರದ ಶಿವರಾಮ ಶೆಟ್ಟಿ ಹಾಗೂ ಅವರ ಪತ್ನಿ ಮಮತಾ ಅವರು ಮನೆಗೆ ಬೀಗ ಹಾಕಿ, ಬೆಂಗಳೂರಿನ ಮಕ್ಕಳ ಮನೆಗೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ. ಶನಿವಾರ ಬೆಳಿಗ್ಗೆ ಕೆಲಸದಾಕೆ ಹೂವಿನ ಗಿಡಕ್ಕೆ ನೀರು ಬಿಡಲು ಬಂದ ಸಂದರ್ಭ ಮನೆಯ ಬಾಗಿಲು ಅರ್ಧ ತೆರೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡು ಮನೆಯ ಯಜಮಾನರಿಗೆ ಫೋನ್ ಮಾಡಿದ್ದಾಳೆ. ಬಳಿಕ ಮನೆ ಮಾಲಕರ ಸಂಬಂಧಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ವಜ್ರಾಭರಣ ಹಾಗೂ ಬೆಲೆಬಾಳುವ ರೇಷ್ಮೆ ಸೀರೆಗಳನ್ನು ಕದ್ದೊಯ್ದಿದ್ದಾರೆ ಎಂದು ಅಂದಾಜಿಸಲಾಗಿದೆ. ಬೆಳ್ಳಿಯ ವಸ್ತುಗಳನ್ನು ಹಾಗೆಯೇ ಬಿಟ್ಟಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply