Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಗ್ರಾಮ ಒನ್ ಸಹಕಾರಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಗ್ರಾಮ ಒನ್ ಸಹಕಾರಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಸೇವಾ ಕೇಂದ್ರಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಹಾಗೂ ಸೇವಾ ಸಿಂಧು / ಗ್ರಾಮ ಒನ್ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳ ನಿರ್ವಾಹಕರ ಗ್ರಾಮ ಒನ್ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ 208 ಕ್ಕೂ ಹೆಚ್ಚು ಗ್ರಾಮ ಒನ್ ಕೇಂದ್ರಗಳೂ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಿದಂತಾಗಿದೆ. ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಇಲಾಖೆಗಳ ಸಮನ್ವಯೊಂದಿಗೆ ಇನ್ನಷ್ಟು ಉತ್ಸುಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

    ಆಯುಷ್ಮಾನ್ ಭಾರತ, ಗ್ಯಾರಂಟಿ ಯೋಜನೆಗಳು ಸೇರಿದಂತೆ ಮತ್ತಿತರರ ಸರ್ಕಾರ ಯೋಜನೆಗಳಿಗೆ ಗ್ರಾಮ ಒನ್ ನಿರ್ವಾಹಕರುಗಳು ಸಾರ್ವಜನಿಕರಿಂದ ಹೆಚ್ಚುವರಿ ಶುಲ್ಕವನ್ನು ಪಡೆಯದೇ ಸರ್ಕಾರ ನಿಗಧಿಪಡಿಸಿದ ಶುಲ್ಕವನ್ನು ಪಡೆಯುವ ಮೂಲಕ ಸಾರ್ವಜನಿಕರಿಗೆ ತಮ್ಮ ಪ್ರಾಮಾಣಿಕ ಸೇವೆಯನ್ನು ನೀಡಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಲು ಅನುಕೂಲವಾಗುವಂತೆ ಗ್ರಾಮ ಮಟ್ಟದಲ್ಲಿ ಸ್ಥಾಪನೆಯಾಗಿರುವ ಗ್ರಾಮ ಒನ್ ಸೆಂಟರ್‌ಗಳ ಲಾಭ ಪಡೆಯಬಹುದಾಗಿದೆ ಎಂದರು.

    Click here

    Click here

    Click here

    Call us

    Call us

    ಗ್ರಾಮ ಒನ್‌ನ ಜಿಲ್ಲಾ ಯೋಜನಾ ವ್ಯವಸ್ಥಾಪಕ ನವೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ವಾರದ ಏಳು ದಿನಗಳು ಸಹ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ಒನ್ ಕೇಂದ್ರಗಳಲ್ಲಿ ಯೋಜನೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.

    ಈ ಸಂದರ್ಭದಲ್ಲಿ ಉತ್ತಮ ಸಮಾಜ ಸೇವೆಗಾಗಿ ನಂದಾ ಕಿಶೋರ್ ಬ್ರಹ್ಮಾವರ ಇವರನ್ನು ಸನ್ಮಾಯಿಸಲಾಯಿತು.

    ಕಾರ್ಯಕ್ರಮದಲ್ಲಿ ಇಡಿಸಿಎಸ್ ನಿರ್ದೇಶನಾಲಯದ ಉಪ ನಿರ್ದೇಶಕ ಮಹವೀರ್, ಗ್ರಾಮ ಒನ್ ಕೇಂದ್ರಗಳ ಮಾಲೀಕರು, ನಿರ್ವಾಹಕರು, ಜಿಲ್ಲಾಡಳಿತದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಸುಷ್ಮಾ ಉದ್ಯಾವರ ಸ್ವಾಗತಿಸಿ, ವಿಕಾಸ್ ಕಡೆಕಾರ್ ನಿರೂಪಿಸಿ, ಗಣೇಶ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    three + 8 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.