Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ
    ಉಡುಪಿ ಜಿಲ್ಲೆ

    ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಕೌಶಲ್ಯಾಭಿವೃದ್ಧಿ ಪಡೆದ ಅರ್ಹ ಫಲಾನುಭವಿಗಳಿಗೆ ಚಟುವಟಿಕೆಗಳನ್ನು ನಡೆಸಲು ಬ್ಯಾಂಕುಗಳು ಆರ್ಥಿಕ ನೆರವು ನೀಡಲು ಶಿಫಾರಸ್ಸು ಆದ ಎಲ್ಲಾ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸರಕಾರದ ಪಿಎಂ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವ ಸಂದರ್ಭದಲ್ಲಿ ಸ್ಟ್ಯಾಂಪ್ ಶುಲ್ಕವನ್ನು ಹೆಚ್ಚು ಪಡೆಯುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಈ ಯೋಜನೆಯಡಿ ಸಾಲ ಸೌಲಭಕ್ಕೆ 500 ರೂಪಾಯಿ ಸ್ಟ್ಯಾಂಪ್ ಶುಲ್ಕ ಪಡೆಯಬೇಕು ಎಂದರು.

    ಪಿಎಂ ವಿಶ್ವಕರ್ಮ ಯೋಜನೆಯಡಿ ಆರ್ಥಿಕ ನೆರವು ಕೋರಿ ಬ್ಯಾಂಕುಗಳಿಗೆ ಹೋದ ಸಂದರ್ಭದಲ್ಲಿ ಅಲ್ಲಿನ ಮ್ಯಾನೇಜರ್ ಗಳು ಸ್ಥಳೀಯ ಕನ್ನಡ ಭಾಷೆ ಬಾರದೇ ಅರ್ಹ ಫಲಾನುಭವಿಗಳಿಗೆ ನೆರವು ಪಡೆಯಲು ತೊಂದರೆ ಆಗುತ್ತಿದೆ. ಭಾಷಾ ಸಮಸ್ಯೆಗಳಿದ್ದಲ್ಲಿ ಬ್ಯಾಂಕ್ ನ ಇತರೆ ಸಿಬ್ಬಂದಿಗಳ ಸಹಾಯದಿಂದ ಸಂವಹನ ನಡೆಸಿ, ಅವರುಗಳಿಗೆ ಸಹಾಯ ಮಾಡಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯಲ್ಲಿನ ಎಲ್ಲಾ ಬ್ಯಾಂಕುಗಳ ವತಿಯಿಂದ 60,519 ಕೋಟಿ ರೂ. ನಷ್ಟು ವಹಿವಾಟು ನಡೆದಿದ್ದು, ಕಳೆದ ವರ್ಷಕ್ಕಿಂತ 5734 ಕೋಟಿ ರೂ. ಗೂ ಹೆಚ್ಚು ವಹಿವಾಟು ನಡೆದು ಶೇ. 10.47 ರಷ್ಟು ಹೆಚ್ಚಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲೆಯಲ್ಲಿ ವಿಶೇಷ ಗಮನ ಕಾರ್ಯಕ್ರಮಗಳ ಅಡಿಯಲ್ಲಿ ಬ್ಯಾಂಕುಗಳು ದುರ್ಬಲ ವರ್ಗಗಳಿಗೆ 1233 ಕೋಟಿ ರೂ., ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ 82.90ಕೋಟಿ ರೂ., ವಸತಿ ಕ್ಷೇತ್ರಗಳ ಸುಸ್ಥಿರ ಅಭಿವೃದ್ಧಿಗಾಗಿ 136 ಕೋಟಿ ರೂ. ಗಳ ಸಾಲ ವಿತರಣೆ ಮಾಡಲಾಗಿದೆ ಎಂದರು.

    ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಠಿಸಲು ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ 261 ಅರ್ಜಿಗಳು ಸ್ವೀಕೃತವಾಗಿದ್ದು, ಇದರಲ್ಲಿ 131 ಅರ್ಜಿಗಳನ್ನು ವಿಲೇವಾರಿ ಮಾಡಿ, 28.34 ಕೋಟಿ ರೂ. ಸಾಲ ವಿತರಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ, ಅರ್ಹ ಫಲಾನುಭವಿ ಉದ್ಯಮಿಗಳಿಗೆ ಸಬ್ಸಿಡಿಯನ್ನು ಶೀಘ್ರವಾಗಿ ವಿತರಿಸುವಂತೆ ಸೂಚನೆ ನೀಡಿದರು.

    ಕೆನರಾ ಬ್ಯಾಂಕ್‌ನ ರೀಜನಲ್ ಮ್ಯಾನೆಜರ್ ಶ್ರೀಜಿತ್ ಕೆ ಮಾತನಾಡಿ, ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ 256 ಬ್ರಾಂಚ್‌ಗಳು, ಖಾಸಗಿ ಸೆಕ್ಟರ್‌ನ 96 ಬ್ರಾಂಚ್ ಗಳು, ಆರ್.ಆರ್.ಬಿ ನ 23 ಬ್ರಾಂಚ್‌ಗಳು, ಕೋ ಆಪರೇಟಿವ್ ಸೆಕ್ಟರ್‌ನ 52 ಬ್ರಾಂಚ್‌ಗಳು ಹಾಗೂ ಸಣ್ಣ ಫೈನಾನ್ಸ್ 3 ಬ್ರಾಂಚ್ ಸೇರಿದಂತೆ ಗ್ರಾಮೀಣ ಭಾಗದಲ್ಲಿ 236, ನಗರ ವ್ಯಾಪ್ತಿಯಲ್ಲಿ 193 ಸೇರಿ ಒಟ್ಟು 429 ಬ್ಯಾಂಕುಗಳು ಹಾಗೂ 491 ಎಟಿಎಂಗಳು ಕಾರ್ಯನಿರ್ವಹಿಸುತ್ತಿದೆ ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ., ಬೆಂಗಳೂರಿನ ಆರ್.ಬಿ.ಐ ನ ಎಫ್.ಐ.ಡಿ.ಡಿ ಸೆಕ್ಷನ್‌ನ ಟಿ.ಎನ್ ಮ್ಯಾನೇಜರ್ ವೆಂಕಟರಾಮಯ್ಯ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.