ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹಾಲಾಡಿ ಗೋಳಿಯಂಗಡಿ ಮಾರ್ಗದ ಭತ್ತಗುಳಿ ಸೇತುವೆ ಬಳಿ ಸ್ಕೂಟರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಡಿ. 21ರಂದು ನಡೆದಿದೆ.
ಹರೀಶ್ ಸ್ಕೂಟರ್‌ನಲ್ಲಿ ಶರತ್ ಅವರನ್ನು ಕುಳ್ಳಿರಿಸಿಕೊಂಡು ಹಾಲಾಡಿಯಿಂದ ಗೋಳಿಯಂಗಡಿ ಕಡೆಗೆ ಹೋಗುತ್ತಿದ್ದಾಗ ಭತ್ತಗುಳಿ ಸೇತುವೆ ಬಳಿ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರರು ರಸ್ತೆಗೆ ಬಿದ್ದು, ಗಂಭೀರವಾಗಿ ಗಾಯಗೊಂಡರು.
ಹಾಲಾಡಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.