ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಅಂಗವಿಕಲರ ಒಕ್ಕೂಟ,ಹಾಗೂ ಪಾಲಕರ ಉಡುಪಿ ಜಿಲ್ಲಾ ಸಮಿತಿ ಕುಂದಾಪುರ ಹಾಗೂ ಬೈಂದೂರು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟ ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ನಡೆದ ದಿವ್ಯಾಂಗರ ಸಮಾವೇಶ, ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪ್ರದರ್ಶನ 2024-25 ಕಾರ್ಯಕ್ರಮದ ಸಮಾರೋಪ ಸಮಾರಂಭವು ಶನಿವಾರದಂದು ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ಅದ್ದೂರಿಯಾಗಿ ನೆರೆವೇರಿಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಅಧ್ಯಕ್ಷರಾದ ಸಂತೋಷ್ ಜಾಲಾಡಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳ ಎರಡದಂದು ಬೈಂದೂರು ಗಾಂಧಿ ಮೈದಾನದಲ್ಲಿ ನಡೆದ ಕ್ರೀಡಾಕೂಟದ ಬಹುಮಾನವನ್ನು ವಿತರಿಸಲಾಯಿತು.
ಬಹುಮಾನ ವಿತರಣೆ ಮಾಡಿ ಮುಖ್ಯ ಅತಿಥಿಗಳಾದ ಪುರಸಭೆ ಅಧ್ಯಕ್ಷರಾದ ಮೋಹನದಾಸ ಶೆಣೈ ಅವರು ಮಾತನಾಡಿ, ದಿವ್ಯಾಂಗರಿಗೆ ನ್ಯೂನ್ಯತೆ ಶಾಪವಲ್ಲ ಇಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ರತಿಭೆಗಳು ನಮ್ಮ ಜಿಲ್ಲೆಯಲ್ಲಿದ್ದಾರೆ, ಸರ್ಕಾರ, ಸಂಘ ಸಂಸ್ಥೆಗಳು ದಿವ್ಯಾಂಗರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಬೇಕೆಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಮಾತನಾಡಿ, ಸಮಾಜದಲ್ಲಿ ದಿವ್ಯಾಂಗರ ಜೊತೆ ಸಂಘ ಸಂಸ್ಥೆಗಳ ನಿಂತಾಗ ಅವರ ಸಾಧನೆಗೆ ಉತ್ಸಾಹ ಸಿಕ್ಕುತ್ತದೆ ಇಂತಹ ಕಾರ್ಯಕ್ರಮಗಳು ಪ್ರತಿ ವರ್ಷವೂ ನಡೆಯಬೇಕು ನಮ್ಮ ಸಂಸ್ಥೆಯ ಪ್ರೋತ್ಸಾಹ ಸದಾ ಇರುತ್ತದೆ ಎಂದು ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಂಟರ್ ಯಾನೆ ನಾಡವರ ಮಾತೃ ಸಂಘ ಮಂಗಳೂರು ಕುಂದಾಪುರ ತಾಲೂಕು ಸಮಿತಿಯ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ ಕಾವ್ರಾಡಿ , ಪುರಸಭೆಯ ಮುಖ್ಯಾಧಿಕಾರಿ ಆನಂದ ಕೆ.ಎ.ಎಮ್.ಎಸ್, ಭಾರತೀಯ ರೆಡ್ ಕ್ರಾಸ್ ಘಟಕದ ಸದಸ್ಯ ಶಿವರಾಮ ಶೆಟ್ಟಿ , ಬೈಂದೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಮನ್ವಯಾಧಿಕಾರಿ ಪ್ರದೀಪ್ ಕುಮಾರ್, ಕುಂದಾಪುರ ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ಶಂಕರ್, ವಾಗೋಜ್ಜತಿ ಶಾಲೆ ಮೂಡುಬಗೆ ಮುಖ್ಯೋಪಾಧ್ಯಾಯ ರವೀಂದ್ರ, ಜಿಲ್ಲಾಧ್ಯಕ್ಷರಾದ ಮಂಜುನಾಥ ಹೆಬ್ಬಾರ್, ಗೌರವಾಧ್ಯಕ್ಷರಾದ ವೆಂಕಟೇಶ ಕೋಣೆ, ಕುಂದಾಪುರ ಹಾಗೂ ಬೈಂದೂರು ತಾಲೂಕು ಪುನರ್ವಸತಿ ಕಾರ್ಯಕರ್ತರ ಒಕ್ಕೂಟದ ಅಧ್ಯಕ್ಷ ಅಶ್ವಕ್ ಅಹಮ್ಮದ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಇಂಜಿನಿಯರ್ ಆಕಾಶ್ ಶೆಟ್ಟಿ ಅಂಪಾರು ಕಾರ್ಯಕ್ರಮವನ್ನು ಸ್ವಾಗತಿಸಿ, ನಿರೂಪಿಸಿದರು. ಸವಿತಾ ಶಿರೂರು ಅವರು ವಂದಿಸಿದರು.