ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೂಡಬಿದಿರೆಯ ಆಳ್ವಾಸ್ ಸೆಂಟ್ರಲ್ ಶಾಲೆಯಲ್ಲಿ ಡಿ.21ರಂದು ನಡೆದ ಎಐಸಿಎಸ್ ಮಟ್ಟದ ಅಂತರ್ ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆಯಿತು.
14 ವರ್ಷದೊಳಗಿನ ಬಾಲಕರ ವಿಭಾಗದ 600 ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ಸಿದ್ದಲಿಂಗ ಪಿ. ಓಲೇಕಾರ್ ದ್ವಿತೀಯ ಸ್ಥಾನವನ್ನು, 17 ವರ್ಷದೊಳಗಿನ ಬಾಲಕರ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ 10ನೇ ತರಗತಿಯ ತೇಜಸ್ ಲಕ್ಷ್ಮಣ ಸಂಭಾಜಿ ದ್ವಿತೀಯ ಸ್ಥಾನವನ್ನು ಹಾಗೂ 400ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ಈರಣ್ಣ ಕಾಳಪ್ಪ ಪತ್ತಾರ್ ತೃತೀಯ ಸ್ಥಾನವನ್ನು, 17 ವರ್ಷದೊಳಗಿನ ಬಾಲಕಿಯರ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ 9ನೇ ತರಗತಿಯ ಅನಿಕಾ ಹೆಚ್ ವೈ ತೃತೀಯ ಸ್ಥಾನವನ್ನು ಪಡೆದರು.
ವಿದ್ಯಾರ್ಥಿಗಳ ಈ ಅಮೋಘ ಪ್ರದರ್ಶನದ ಕುರಿತಾಗಿ ಪ್ರತಿಕ್ರಿಯಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ “2024-25ನೇ ಸಾಲಿನಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಹಲವಾರು ಪ್ರಶಸ್ತಿ, ಪದಕಗಳನ್ನು ಗೆದ್ದಿರುವುದು ಇಡೀ ಹಟ್ಟಿಯಂಗಡಿ ವಸತಿಶಾಲಾ ಕುಟುಂಬಕ್ಕೆ ಹೆಮ್ಮೆ ತರುವ ಸಂಗತಿಯಾಗಿದೆ.
ಈ ಅದ್ಭುತ ಸಾಧನೆಗೆ ನಮ್ಮ ವಿದ್ಯಾರ್ಥಿಗಳಲ್ಲಿನ ಛಲ, ಸತತ ಪ್ರಯತ್ನ, ಕ್ರೀಡೆಗಳ ಮೇಲಣ ಅಭಿಮಾನ ಮತ್ತು ನಮ್ಮ ಸಂಸ್ಥೆಯ ದೈಹಿಕ ಶಿಕ್ಷಕರ ಅವಿರತ ಶ್ರಮವೇ ಪ್ರಮುಖ ಕಾರಣವಾಗಿದೆ ಎನ್ನುತ್ತಾ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು ಮತ್ತು ದೈಹಿಕ ಶಿಕ್ಷಕರನ್ನು ಅಭಿನಂದಿಸಿದರು.