ಕುಂದಾಪುರ: ಸಮುದ್ರ ಪಾಲಾಗಿದ್ದ ಜೆಟ್‌ ಸ್ಕೀ ರೈಡರ್ ಶವ ಪತ್ತೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ನಾಪತ್ತೆ ಆಗಿದ್ದ ಜೆಟ್‌ ಸ್ಕೀ ರೈಡರ್ ರೋಹಿದಾಸ್ ಯಾನೆ ರವಿ (41) ಅವರ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆ ಆಗಿದೆ.

Call us

Click Here

ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಅವರು 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿಗೆ ಮಾಹಿತಿ ನೀಡಿ, ತದನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು.

ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ ಗಂಗೊಳ್ಳಿ, ಕೆ. ಎನ್. ಡಿ. ಸಿಬ್ಬಂದಿ ನಿಶಾಂತ್ ಖಾರ್ವಿ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಮೃತ ರೊಹಿದಾಸ್ ಸಹೋದ್ಯೋಗಿಗಳು ಶವವನ್ನು ತೀರದಿಂದ ಸಾಗಿಸಲು ಸಹಕರಿಸಿದರು.

ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ ಶವವನ್ನು ಇಬ್ರಾಹಿಂ ಗಂಗೊಳ್ಳಿ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯ ಶೀತಲೀಕರಣ ಘಟಕಕ್ಕೆ ಕೊಂಡೊಯ್ದಿದ್ದಾರೆ.

Leave a Reply