Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಅಂಗನವಾಡಿ ವಿವಿಧ ಹುದ್ದೆಗೆ ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ
    ಉಡುಪಿ ಜಿಲ್ಲೆ

    ಉಡುಪಿ: ಅಂಗನವಾಡಿ ವಿವಿಧ ಹುದ್ದೆಗೆ ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ “Application Successfully Uploaded’’ಎಂಬ ಮೇಸೆಜ್ ಅವರುಗಳ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 400 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 156 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.

    Click Here

    Call us

    Click Here

    ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ 2025 ರ ಜನವರಿ 5 ರ ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್ ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಸರ್ಕಾರವು ಆದೇಶಿಸಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಒಂದನೇ ಹಂತ- ಆನ್‌ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತ – ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡುವುದು, ಮೂರನೇ ಹಂತ – ತಮ್ಮ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಹಾಗೂ ನಾಲ್ಕನೇ ಹಂತ – ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು.

    ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    five × two =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.