ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿನ ಸಮೀಪ ಉಳ್ಳೂರು ಅಬ್ಬಿಬೇರು ಬಳಿ ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನಪ್ಪಿದ ಘಟನೆ ನಡೆದಿದೆ.
ಅಬ್ಬಿಬೇರು ಎಂಬಲ್ಲಿ ಬಿಜು ಅಗಸ್ಟಿನ್ ಅವರ ತೋಟದಲ್ಲಿ ಅಡಿಕೆ ಕೊಯ್ಯುತ್ತಿರುವಾಗ ಅಲ್ಯುಮೀನಿಯಂ ಕೊಕ್ಕೆ (ದೋಟಿ) ಯು ವಿದ್ಯುತ್ ತಂತಿಗೆ ಸ್ಪರ್ಶಿಸಿ ಝಾರ್ಖಂಡ್ ರಾಜ್ಯದ ಕಾರ್ಮಿಕ ರಾಮ್ ಕಿಶುನ್ ಓರಾನ್ (34) ಮೃತಪಟ್ಟವರು.
ವಿದ್ಯುತ್ ಆಘಾತಕ್ಕೊಳಗಾಗಿ ನೆಲಕ್ಕೆ ಬಿದ್ದ ಅವರನ್ನು ಕೂಡಲೇ ಸ್ಥಳೀಯರು ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದ್ದಾಗಿ ತಿಳಿಸಿದರು.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಗೆ ಪ್ರಕರಣ ದಾಖಲಾಗಿದೆ.










