Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ
    Uncategorized

    ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಂಗಳೂರು,ಡಿ.26:
    ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ರಾತ್ರಿ 8:06 ಗಂಟೆ ಸುಮಾರಿಗೆ ಏಮ್ಸ್‌ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 9:51ಕ್ಕೆ ಅವರು ನಿಧನರಾದರು ಎಂದು ಏಮ್ಸ್ ತಿಳಿಸಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

    Click Here

    Call us

    Click Here

    ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್​ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.

    ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್‍ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.

    ಮನಮೋಹನಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ್ದರು. ಡಾ. ಸಿಂಗ್ ಅವರು ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು 1948ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದ್ದರು. ಅವರ ಶೈಕ್ಷಣಿಕ ಸಾಧನೆ ಅವರನ್ನು ಪಂಜಾಬ್ ನಿಂದ ಇಂಗ್ಲೆಂಡ್ ನ ಕೇಂಬ್ರಿಜ್ ವಿಶ್ವವಿದ್ಯಾಲಯಕ್ಕೆ ಕರೆದೊಯ್ಯಿತು. ಅಲ್ಲಿ ಅವರು 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ ಅವರು 1962ರಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ನಫ್ ಫೀಲ್ಡ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದರು. ಅವರ ಕೃತಿ ಭಾರತದ ರಫ್ತು ಸ್ಥಿತಿ ಮತ್ತು ಸ್ವಾವಲಂಬಿ ಸುಸ್ಥಿರ ಪ್ರಗತಿಯಲ್ಲಿ ಅದರ ಭವಿಷ್ಯ “India’s Export Trends and Prospects for Self-Sustained Growth” [Clarendon Press, Oxford, 1964] ಭಾರತದ ಆಂತರಿಕ ಆಧಾರಿತ ವ್ಯಾಪಾರ ನೀತಿಯ ಆರಂಭಿಕ ವಿಮರ್ಶೆಯಾಗಿತ್ತು.

    ಡಾ. ಮನಮೋಹನಸಿಂಗ್ ಅವರ ಶೈಕ್ಷಣಿಕ ಜ್ಞಾನ ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಹಾಗೂ ದೆಹಲಿಯ ಪ್ರತಿಷ್ಠಿತ ಆರ್ಥಿಕ ಶಾಲೆಯಲ್ಲಿ ಬೋಧಕರಾಗಿ ಸಾಕಾರಗೊಂಡವು. ಯು.ಎನ್.ಸಿ.ಟಿ.ಎ.ಡಿ. ಸಚಿವಾಲಯದಲ್ಲಿ ಅವರು ಕೆಲಕಾಲ ಸೇವೆ ಸಲ್ಲಿಸಿದ್ದರು. ಇದರ ಫಲವಾಗಿ 1987ರಿಂದ 1990ರವರೆಗೆ ಅವರನ್ನು ಜೀನಿವಾದಲ್ಲಿನ ದಕ್ಷಿಣ ಆಯೋಗಕ್ಕೆ ಮಹಾಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

    Click here

    Click here

    Click here

    Call us

    Call us

    ಸ್ವತಂತ್ರ ಭಾರತದ ಆರ್ಥಿಕ ಇತಿಹಾಸದಲ್ಲಿ ಒಂದು ಮಹತ್ವದ ತಿರುವು ಮೂಡಿತು. 1991ರಿಂದ 1996ರವರೆಗೆ ಡಾ. ಸಿಂಗ್ ಅವರು ಭಾರತದ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಆಗ ಮಾಡಿದ ಆರ್ಥಿಕ ಸುಧಾರಣೆಗಳಿಗೆ ಈಗಲೂ ವಿಶ್ವದ ಮನ್ನಣೆ ಇದೆ. ಜನಪ್ರಿಯದೃಷ್ಟಿಕೋನದಿಂದ ನೋಡುವುದಾದರೆ ಭಾರತದ ಅಂದಿನ ದಿನಗಳು ಡಾ. ಸಿಂಗ್ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತವೆ. ಡಾ. ಸಿಂಗ್ ಅವರು ಸಾಮಾಜಿಕ ಕ್ಷೇತ್ರದ ತಮ್ಮ ಅದ್ವಿತೀಯ ಸಾಧನೆಗಾಗಿ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

    ರಾಜ್ಯದಲ್ಲಿ 7 ದಿನ ಶೋಕಾಚರಣೆ:
    ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ಹಾಗಾಗಿ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಏಳು ದಿನಗಳ ರಾಜ್ಯಾದ್ಯಂತ ಶೋಕಾಚರಣೆ ಮತ್ತು ನಾಳೆ ಸರ್ಕಾರಿ ರಜೆ ಘೋಷಿಸಿದೆ. ನಾಳಿನ ಎಲ್ಲ ಕೇಂದ್ರ ಸರ್ಕಾರಿ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ. ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d