ಕುಂದಾಪುರ: ಅಪೂರ್ಣ ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಗಸ್ಟ್ 16 ರಂದು ನೇಮಕಾತಿ ಅಧಿಸೂಚನೆ ಹೊರಡಿಸಿ, ಸೆಪ್ಟಂಬರ್ 19 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ.

Call us

Click Here

ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 1ನೇ ಹಂತದಲ್ಲಿಯೇ “Application Successfully Uploaded’’ ಎಂಬ ಮೇಸೆಜ್ ಅವರುಗಳ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 225 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 101 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.

ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ ಜನವರಿ 5 ರ ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್‌ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಸರಕಾರವು ಆದೇಶಿಸಿದ್ದು, ಅಪೂರ್ಣ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಒಂದನೇ ಹಂತದಲ್ಲಿ – ಆನ್‌ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತದಲ್ಲಿ – ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡುವುದು, ಮೂರನೇ ಹಂತದಲ್ಲಿ – ತಮ್ಮ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಹಾಗೂ ನಾಲ್ಕನೇ ಹಂತದಲ್ಲಿ ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು.

ಅಗತ್ಯವಿರುವ ಎಲ್ಲಾ ದಾಖಲಾತಿಗಳು ಸೆಪ್ಟಂಬರ್ 19 ರ ಒಳಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವುದು ಕಡ್ಡಾಯವಾಗಿದ್ದು, ತದನಂತರದ ದಿನಾಂಕದಿಂದ ಪಡೆಯಲಾದ ದಾಖಲಾತಿಗಳನ್ನು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಸೂಚನಾ ಫಲಕದಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Click here

Click here

Click here

Click Here

Call us

Call us

Leave a Reply