Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪೂರ್ವಭಾವಿ ಮರು ಪರೀಕ್ಷೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ
    ಉಡುಪಿ ಜಿಲ್ಲೆ

    ಪೂರ್ವಭಾವಿ ಮರು ಪರೀಕ್ಷೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ

    Updated:30/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆಯು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದಿಂದ ಈ ಕೆಳಗಿನಂತೆ ತಿಳಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ತಿಳಿಸಿದ್ದಾರೆ.

    Click Here

    Call us

    Click Here

    ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನು ಹಾಗೂ ಅಭ್ಯರ್ಥಿಯ ಭಾವಚಿತ್ರವಿರುವ ಮೂಲ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರುಪಡಿಸಿದ ನಂತರವೇ ಪರೀಕ್ಷಾ ಉಪಕೇಂದ್ರವನ್ನು ಪ್ರವೇಶಿಸಲು ಅನುಮತಿ ನೀಡಲಾಗುವುದು. ಮೂಲ ಗುರುತಿನ ಚೀಟಿ ಹಾಜರುಪಡಿಸದ ಅಭ್ಯರ್ಥಿಗಳಿಗೆ ಪರೀಕ್ಷಾ ಉಪಕೇಂದ್ರವನ್ನು ಪ್ರವೇಶಿಸಲು ಅನುಮತಿ ಇರುವುದಿಲ್ಲ.

    ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಬೆಳಗ್ಗಿನ ಹಾಗೂ ಮಧ್ಯಾಹ್ನದ ಅಧಿವೇಶನಗಳ ಪರೀಕ್ಷೆ ಪ್ರಾರಂಭವಾಗುವ 02 ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಮೊಬೈಲ್, ಕ್ಯಾಲ್ಕುಲೇಟರ್, ಸ್ಮಾರ್ಟ್ ವಾಚ್, ಇತ್ಯಾದಿ ಗ್ಯಾಡ್ಜೆಟ್ ಎಲೆಕ್ಟಾನಿಕ್ ಉಪಕರಣಗಳನ್ನು ಬ್ಯಾಗ್‌ನಲ್ಲಿ ಇರಿಸಿ, ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವಂತಿಲ್ಲ. ಶೂ, ಸಾಕ್ಸ್, ಸ್ವೆಟರ್ ಮತ್ತು ಜರ್ಕಿನ್ ಇತರೆ ವಸ್ತುಗಳನ್ನು ಧರಿಸುವುದನ್ನು ನಿಷೇಧಿಸಲಾಗಿದ್ದು, ಸಾಧಾರಣ ಚಪ್ಪಲಿಯನ್ನು ಧರಿಸಿ, ಪರೀಕ್ಷೆಗೆ ಹಾಜರಾಗಬೇಕು.

    ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳಾದ ಮೊಬೈಲ್, ಬ್ಲೂಟೂಥ್, ಕ್ಯಾಲ್ಕುಲೇಟರ್, ವೈಟ್ ಫ್ಲೂಯಡ್, ವೈರ್‌ಲೆಸ್ ಸೆಟ್ಸ್, ಪೇಪರ್, ಬುಕ್ಸ್, ಕಿವಿಯಲ್ಲಿ ಯಾವುದೇ ಎಲೆಕ್ಟಾನಿಕ್ ಡಿವೈಸ್ ಮತ್ತು ಮೈಕ್ರೋಫೋನ್ ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ತುಂಬು ತೋಳಿನ ಶರ್ಟ್, ಮಂಗಳ ಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ ಯಾವುದೇ ಆಭರಣಗಳನ್ನು, ಜಾಕೆಟ್ಸ್ ಮತ್ತು ಸ್ವೆಟರ್‌ಗಳನ್ನು ಧರಿಸಿ ಹಾಜರಾಗುವುದನ್ನು ಮತ್ತು ಮೆಟಲ್ ವಾಟರ್ ಬಾಟಲ್ಸ್ ಅಥವಾ ನಾನ್ ಟ್ರಾನ್ಸಪರೆಂಟ್ ವಾಟರ್ ಬಾಟೆಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. 

    ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ. ಧಾರ್ಮಿಕ ಆಚರಣೆಗೆ ಸಂಬಂಧಿಸಿದ ವಸ್ತುಗಳನ್ನು ಧರಿಸಿ ಬರುವ ಅಭ್ಯರ್ಥಿಗಳು ಮತ್ತು ಹಿಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡಬೇಕು. ಹಿಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.

    Click here

    Click here

    Click here

    Click Here

    Call us

    Call us

    ಎರಡನೇ ಹಂತದಲ್ಲಿ ಪರೀಕ್ಷಾ ತಪಾಸಣೆ ನಡೆಸಿದ ನಂತರ ಎಲ್ಲಾ ಅಭ್ಯರ್ಥಿಗಳ ಗುರುತಿನ ದಾಖಲೆ/ ಚೀಟಿ ಮತ್ತು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಪರಿಶೀಲಿಸಿ, ನಂತರವೇ ಪರೀಕ್ಷಾ ಉಪಕೇಂದ್ರದ ಒಳಗೆ ಪ್ರವೇಶ ನೀಡಲಾಗುವುದು.

    ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗವು 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆಯ ಪ್ರವೇಶ ಪತ್ರವನ್ನು ವೆಬ್‌ಸೈಟ್ http://kpsc.kar.nic.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

    ತಮ್ಮದೇ ಆದ ಲಿಪಿಕಾರರನ್ನು ಕರೆತರುವ ಅಂಗವಿಕಲ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಲಿಪಿಕಾರರ ಪ್ರವೇಶ ಪತ್ರವನ್ನು ಸಹ ಡೌನ್‌ಲೋಡ್ ಮಾಡಿಕೊಳ್ಳಬೇಕು. ಪರಿಷ್ಕೃತ ಪ್ರವೇಶ ಪತ್ರವನ್ನು ಮಾತ್ರ ಪರಿಗಣಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    DC Udupi
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    fourteen − 8 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.