ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಸ್ಪೀಕರ್ ಯು. ಟಿ‌. ಖಾದರ್ ಭೇಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜಮ್ಮು ಕಾಶ್ಮೀರದ ಪೂಂಛನಲ್ಲಿ ಡಿ.24 ರಂದು ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಯೋಧ ಬೀಜಾಡಿ ಕೆಳಮನೆಯ ಅನೂಪ್ ಪೂಜಾರಿ ಅವರ ಮನೆಗೆ ಶುಕ್ರವಾರ ಸಂಜೆ ವಿಧಾನಸಭೆ ಸ್ವೀಕರ್ ಯು.ಟಿ. ಖಾದರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

Call us

Click Here

ಅನೂಪ್ ಪೂಜಾರಿ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವಂತೆ ಸ್ಥಳೀಯರು ಹಾಗೂ ಕುಟುಂಬದವರು ಮನವಿ ಮಾಡಿದ್ದು, ಮುಖ್ಯಮಂತ್ರಿ ಅವರೊಂದಿಗೆ ಈ ಕುರಿತು ಮಾತನಾಡುವುದಾಗಿ ಯು.ಟಿ.ಖಾದ‌ರ್ ಹೇಳಿದರು.

ದೇಶ ಕಾಯುವ ನಮ್ಮೂರ ಯುವಕನ ಆಕಾಲಿಕ ನಿಧನ ತೀವ್ರ ನೋವನ್ನುಂಟು ಮಾಡಿದೆ. ದುರಂತದಲ್ಲಿ ಮೃತಪಟ್ಟ ರಾಜ್ಯದ ಸೈನಿಕರ ಕುಟುಂಬದವರಿಗೂನ ಸರಕಾರದಿಂದ ದೊರಕುವ ರಾಜ್ಯ ಸವಲತ್ತುಗಳನ್ನು ನೀಡುವ ಬಗ್ಗೆ ಮುಖ್ಯಮಂತ್ರಿಗಳು ಹೇಳಿದ್ದು ಇದನ್ನು ಶೀಘ್ರ ಅನೂಪ್ ಕುಟುಂಬದವರಿಗೂ ಒದಗಿಸಲು ಪ್ರಯತ್ನಿಸಲಾಗುತ್ತದೆ. ಹುತಾತ್ಮ ಯೋಧನ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಸೇರಿದಂತೆ ಯಾವುದೇ ಕಾರ್ಯಕ್ರಮ ರೂಪಿಸುವುದಿದ್ದರೂ, ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿ. ಸರಕಾರದಿಂದ ಅಗತ್ಯ ಸಹಕಾರ ನೀಡಲು ಬದ್ದರಿದ್ದೇವೆ,’ ಎಂದರು.

ಮಾಜಿ ಸಚಿವ ವಿನಯಕುಮಾರ ಸೊರಕೆ ಮಾತನಾಡಿ, ಅನೂಪ್ ಅವರ ಪತ್ನಿ ಮಂಜುಶ್ರೀ ಪದವೀಧರೆಯಾಗಿದ್ದು, ಸರಕಾರಿ ಉದ್ಯೋಗದ ಆಕಾಂಕ್ಷೆ ವ್ಯಕ್ತಪಡಿಸಿ ದ್ದಾರೆ. ಸ್ವೀಕ‌ರ್ ನೇತೃತ್ವದಲ್ಲಿ ನಾವೆಲ್ಲ ಒಟ್ಟಾಗಿ ಈ ಬಗ್ಗೆ ಪ್ರಯತ್ನಿಸುತ್ತೇವೆ. ಹುತಾತ್ಮರಾ ಗಿರುವ ಅವರ ಜೀವವನ್ನು ತರಲು ಖಂಡಿತಾ ಸಾಧ್ಯವಿಲ್ಲ ಆದರೆ ಅವರ ಕುಟುಂಬ ನೆಮ್ಮದಿಯಿಂದ ಜೀವನ ಸಾಗಿಸಲು ಅಗತ್ಯ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುವುದಾಗಿ ತಿಳಿಸಿದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಹುತಾತ್ಮ ಯೋಧ ಅನೂಪ್ ಪೂಜಾರಿ ಅವರ ಪತ್ನಿ ಹಾಗೂ ಕುಟುಂಬಿಕರನ್ನು ಭೇಟಿ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಅನೂಪ್ ಅವರ ನಿಧನ ಕರಾವಳಿಯ ಜನರಿಗೆ ಅತೀವ ದುಃಖ ತಂದಿದೆ. ಸೈನ್ಯಕ್ಕೆ ಸೇರುವ ಯುವಕರಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಅಕಾಡೆಮಿ ಹುಟ್ಟು ಹಾಕಬೇಕು ಎನ್ನುವ ಕನಸು ಅನೂಪ್ ಪೂಜಾರಿ ಅವರಿಗಿತ್ತು ಎನ್ನುವುದನ್ನು ಸ್ಥಳೀಯರು ತಿಳಿಸಿದ್ದಾರೆ. ಅವರ ಕನಸು ನನಸು ಮಾಡಲು ಯಾವುದೇ ಸಲಹೆ ಹಾಗೂ ಸಹಕಾರಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಪ್ರಯತ್ನಿಸುವುದಾಗಿ ತಿಳಿಸಿದರು. ಈ ಸಂದರ್ಭ ಸ್ಥಳದಲ್ಲಿಯೇ 1 ಲಕ್ಷ ರೂ. ಚೆಕ್ ನೀಡಿದ ಶಾಸಕ ಯಶಪಾಲ್ ಸುವರ್ಣ ಅವರು, ಅನೂಪ್ ಅವರ ಪುತ್ರಿ ಇಶಾನಿ ಅವರ ಹೆಸರಿನಲ್ಲಿ ನಿರಖು ಠೇವಣಿ ಇಡುವಂತೆ ಕುಟುಂಬಿಕರಿಗೆ ಹೇಳಿದರು.

Click here

Click here

Click here

Click Here

Call us

Call us

ಸ್ಪೀಕರ್ ಭೇಟಿ ವೇಳೆ ವೇಳೆ ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿ. ಹಿರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ್ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ಪ್ರಕಾಶ್ ಪೂಜಾರಿ ಬೀಜಾಡಿ, ఆవిನಾಶ್ ಉಳ್ಳೂರು, ಶೇಖರ ಚಾತ್ರಬೆಟ್ಟು, ಸದಾನಂದ ಶೆಟ್ಟಿ ಕೆದೂರು, ಹರಿಪ್ರಸಾದ್ ಶೆಟ್ಟಿ ಕಾನಕ್ಕಿ, ಸುರೇಂದ್ರ ಶೆಟ್ಟಿ ಸಹನಾ, ಯಾಸಿನ್ ಹೆಮ್ಮಾಡಿ, ಸುಮತಿ ನಾಗರಾಜ್, ಸುರೇಶ್ ಚಾತ್ರಬೆಟ್ಟು, ಅನಿಲ್ ಚಾತ್ರಬೆಟ್ಟು, ಜಸಿಂತಾ ಡಿಮೆಲ್ಲೋ ಇದ್ದರು

Leave a Reply