ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸಿದ 2024- 25ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢ ಶಾಲೆಯ 7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಪಡೆದಿರುತ್ತಾರೆ .
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.