ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಾಡಿನ ಪ್ರಸಿದ್ಧ ನಿಯತಕಾಲಿಕೆಗಳಲ್ಲಿ ಪ್ರಕಟಣೆ ಕಂಡಿರುವ ಲೇಖಕ, ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡರ ಸೈನ್ಯ ಹಿನ್ನೆಲೆಯ ಕಥಾಸಂಕಲನ ‘ಕಂಟೋನ್ಮೆಂಟ್ ಕಥೆಗಳು’ ಜ .5 ಭಾನುವಾರದಂದು ನಾಗೂರು ಕೃಷ್ಣಲಲಿತ ಕಲಾಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ.
ಸಮಾರಂಭದಲ್ಲಿ ಕ.ಸಾ.ಪ ಉಡುಪಿ ಜಿಲ್ಲೆಯ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅವರು ಕೃತಿ ಲೋಕಾರ್ಪಣೆ ಮಾಡಲಿರುವರು. ಲಾವಣ್ಯ ಬೈಂದೂರು ಅಧ್ಯಕ್ಷ ಬಿ. ನರಸಿಂಹ ನಾಯಕ್ ಅಧ್ಯಕ್ಷತೆ ವಹಿಸಲಿರುವರು ಹಾಗೂ ಸುರಭಿ ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.